ಯುವ ಉತ್ಸಾಹಿ ಬಳಗ (ರಿ.) ಕೇಮಾರು ಹಾಗೂ ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಭಾಗಿತ್ವದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನವು ನ.10 ರಂದು ಬೆಳಿಗ್ಗೆ 9.00ರಿಂದ ಕೇಮಾರು ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಜರಗಲಿದೆ.
ಈ ಶಿಬಿರದಲ್ಲಿ ಆಧಾರ್ ನೊಂದಾವಣೆ & ತಿದ್ದುಪಡಿ ಹಾಗೂ ಸಮಗ್ರ ರಕ್ಷಣಾ ಯೋಜನೆ (ಅಪಘಾತ ವಿಮೆ ₹ 549 / ₹749 ) ಸೇರಿದಂತೆ ಅಂಚೆ ಇಲಾಖೆಯ ಇನ್ನಿತರ ಸೇವೆಗಳು ಲಭ್ಯವಿರಲಿದೆ.
ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.