ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಕೆಂಪಣ್ಣ ಬೆಂಗಳೂರಿನ ಜೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣನವರು ಗುತ್ತಿಗೆದಾರರ ಪರವಾಗಿ ಹಲವು ಪ್ರಮುಖ ವಿಚಾರಗಳನ್ನು ಎತ್ತಿ ಗಮನ ಸೆಳೆದಿದ್ದರು. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ ಕೆಂಪಣ್ಣ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ವಿರುದ್ಧ ಹೋರಾಡಿದ್ದರು. ಈ ವಿಚಾರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ದೊಡ್ಡ ಹೊಡೆತ ನೀಡಿತ್ತು.
ಕೆಂಪಣ್ಣ ಅವರ ಹಠಾತ್ ಸಾವು ಗುತ್ತಿಗೆದಾರರಿಗೆ ಬೇಸರ ತರಿಸಿದೆ. ಕೆಂಪಣ್ಣ ನಿಧನಕ್ಕೆ ಅನೇಕರು ಕಂಬನಿ ಸುರಿಸಿದ್ದಾರೆ.