ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗೆ ಉದ್ಯೋಗ ಅರಸಿಕೊಂಡು ಬಂದು ವಾಸವಾಗಿದ್ದ ಕೇರಳದ ಯುವಕ ಹಾಗೂ ಅಸ್ಸಾಂ ಮೂಲದ ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾ ಪ್ರೀತಿಗೆ ಬಿದ್ದಿದ್ದಾರೆ. ಆದರೆ, ಇಬ್ಬರೂ ಒಟ್ಟಿಗೆ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಯುವಕನೇ ತನ್ನ ಪ್ರೇಯಸಿಯನ್ನು ಕೊಲೆ ಮಾಡಿ ಪರಾರಿ ಆಗಿರುವ ಘಟನೆ ನಡೆದಿದೆದೆ.
ಬೆಂಗಳೂರಿನ ಇಂದಿರಾನಗರ ರಾಯಲ್ ಲಿವಿಂಗ್ ಅಪಾರ್ಟ್ಮೆಂಟ್ ಅಲ್ಲಿ ನಡೆದಿರುವ ಘಟನೆ ನಡೆದಿದೆ. ಈ ಘಟನೆ ಕಳೆದ 3 ದಿನಗಳ ಹಿಂದೆಯೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ಯುವತಿ ಮಾಯಾ ಅಸ್ಸಾಂ ರಾಜ್ಯದವಳಾಗಿದ್ದಾರೆ. ಇನ್ನು ಕೊಲೆ ಮಾಡಿದ ಆರೋಪಿ ಆರವ್ ಅನಾಯ್ ಕೇರಳ ರಾಜ್ಯದವನಾಗಿದ್ದಾರೆ. ಇಬ್ಬರೂ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಈ ವೇಳೆ ಇಬ್ಬರ ಪರಿಚಯವಾಗಿ ಸ್ನೇಹವೂ ಬೆಳೆದಿದೆ. ಇಬ್ಬರ ನಡುವೆ ಸ್ನೇಹ ಕೆಲವೇ ದಿನಗಳಲ್ಲಿ ಪ್ರೀತಿಯಾಗಿ ಅಂಕುರಿಸಿದೆ. ನಂತರ, ಇನ್ನು ಇಬ್ಬರೂ ಮನೆಯನ್ನು ಬಿಟ್ಟು ಒಬ್ಬಂಟಿಯಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದರಿಂದ ನಗರದ ವಿವಿಧೆಡೆ ಸುತ್ತಾಡಿದ್ದಾರೆ.
ನಂತರ ಕಳೆದ ನಾಲ್ಕೈದು ದಿನಗಳ ಹಿಂದೆ ಇಂದಿರಾನಗರದ ದಿ ರಾಯಲ್ ಲಿವಿಂಗ್ ಎಂಬ ಅಪಾರ್ಟ್‌ಮೆಂಟ್‌ನಲ್ಲಿ ಇಬ್ಬರೂ ಒಟ್ಟಿಗೆ ಇದ್ದರು. ಆದರೆ, ಕಳೆದ ಮೂರು ದಿನಗಳ ಹಿಂದೆ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಆಗ ಇಬ್ಬರ ನಡುವೆ ಜಗಳದ ವೇಳೆ ಪ್ರೇಮಿ ಆರವ್ ತನ್ನ ಪ್ರೇಯಸಿ ಮಾಯಾಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಅಲ್ಲಿಂದ ಪರಾರಿ ಆಗಿದ್ದಾರೆ. ಈ ಕೊಲೆ ನಡೆದು ಮೂರು ದಿನಗಳ ನಂತರ ಮನೆಯಿಂದ ದುರ್ವಾಸನೆ ಬಂದ ನಂತರ ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದಿರಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಸ್ಥಳ ಪರಿಶೀಲನೆ ಮಾಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲು ಮುಂದಾಗಿದ್ದಾರೆ.
ಮಾಯಾಳ ದೇಹ ಪೀಸ್ ಪೀಸ್ ಮಾಡಲು ಯತ್ನ: ಮಾಯಾ ಗೊಗೋಯ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ.23 ರಂದು ಮಧ್ಯಾಹ್ನ ಸರ್ವಿಸ್ ಅಪಾರ್ಟ್‌ಮೆಂಟ್‌ಗೆ ಆಗಮಿಸಿದ್ದಾರೆ. ಮಾಯಾ ಗೊಗೋಯ್ ಹಾಗೂ ಆರವ್ ಹಾರ್ನಿ ಇಬ್ಬರು ಒಟ್ಟಿಗೆ ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅ.24 ರಂದೇ ಮಾಯಾ ಕೊಲೆ ಮಾಡಿರೊ ಶಂಕೆಯಿದೆ. ಕೊಲೆ ಬಳಿಕ ಅದೇ ರೂಮ್ ನಲ್ಲಿಯೇ ಉಳಿದುಕೊಂಡಿದ್ದ ಆಸಾಮಿ. ಅಲ್ಲಿಯೇ ಕೂತು ಸಿಗರೇಟ್ ಸೇದಿದ್ದಾನೆ. ಮೃತದೇಹ ಜೊತೆಯಲ್ಲೇ ಕಾಲ ಕಳೆದಿದ್ದಾನೆ. ಇಂದು ಬೆಳಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ತೆರಳಿದ್ದಾನೆ. ಮೃತದೇಹ ಪೀಸ್ ಮಾಡೊ ಪ್ಲಾನ್ ಇತ್ತಾ ಆರೋಪಿಗೆ? ಕೊನೆ ಪ್ಲಾನ್ ಫೇಲ್ ಆಗಿ ಮೃತದೇಹ ಬಿಟ್ಟು ಪಾರಾರಿಯಾಗಿದ್ದಾನೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.