ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಕೇರಳದ ನರ್ಸ್ ನಿಮಿಷಾ ಪ್ರಿಯಾ

0
27

ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ಕೇರಳ ಮೂಲದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಯೆಮೆನ್ ದೇಶದಲ್ಲಿ ಗಲ್ಲಿಗೇರಿಸಲಾಗುವುದು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಪ್ರಿಯಾ ಅವರಿಗೆ ಮರಣದಂಡನೆ ವಿಧಿಸಲಾಗಿದೆ. ಯೆಮೆನ್‌ನಲ್ಲಿ ವಿದೇಶಿ ಪ್ರಜೆಗಳಿಗೆ ಕಾನೂನುಬದ್ಧ ಅವಶ್ಯಕತೆಯಾಗಿರುವ ಕ್ಲಿನಿಕ್ ಅನ್ನು ತೆರೆಯಲು ಅವರಿಬ್ಬರೂ ಪಾರ್ಟನರ್ ಆಗಿದ್ದರು. ತಲಾಲ್ ಅವರ ಪಾಸ್‌ಪೋರ್ಟ್ ಅನ್ನು ಮರಳಿ ಪಡೆಯುವ ಪ್ರಯತ್ನದಲ್ಲಿ ನಿಮಿಷಾ ಪ್ರಿಯಾ ತಲಾಲ್ ಅವರಿಗೆ ಡ್ರಗ್ ನೀಡಿ ಕೊಂದಿದ್ದಾರೆ ಎಂದು ಆರೋಪಿಸಲಾಗಿತ್ತು. ಅವರು ಮಾದಕವಸ್ತುವಿನ ಅತಿಯಾದ ಸೇವನೆಯಿಂದ ಸಾವನ್ನಪ್ಪಿದ್ದರು.

ತಲಾಲ್ ಸಾವಿನ ನಂತರ, ನಿಮಿಷಾ ಪ್ರಿಯಾ ಮತ್ತು ಅವರ ಯೆಮೆನ್ ಸಹೋದ್ಯೋಗಿ ಹನಾನ್ ಆತನ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನೀರಿನ ಟ್ಯಾಂಕ್‌ನಲ್ಲಿ ವಿಲೇವಾರಿ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ನಿಮಿಷಾಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು.

ನಿಮಿಷಾ ಪ್ರಿಯಾ ಅವರ ತಾಯಿ ಪ್ರೇಮಾ ಕುಮಾರಿ ಅವರ ಪವರ್ ಆಫ್ ಅಟಾರ್ನಿ ಹೊಂದಿರುವ ಮಾನವ ಹಕ್ಕುಗಳ ಕಾರ್ಯಕರ್ತ ಸ್ಯಾಮ್ಯುಯೆಲ್ ಜೆರೋಮ್, ಯೆಮೆನ್ ಜೈಲು ಅಧಿಕಾರಿಗಳು ನಿಮಿಷಾ ಅವರ ಮರಣದಂಡನೆಯ ದಿನಾಂಕದ ಬಗ್ಗೆ ತಿಳಿಸಿದ್ದಾರೆ ಎಂದು ಖಚಿತಪಡಿಸಿದ್ದಾರೆ. 2017ರಲ್ಲಿ ತನ್ನ ಬ್ಯುಸಿನೆಸ್ ಪಾರ್ಟನರ್ ಆಗಿದ್ದ ತಲಾಲ್ ಅಬ್ದೋ ಮಹ್ದಿ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ನಿಮಿಷಾ ಪ್ರಿಯಾಳನ್ನು ಬಂಧಿಸಲಾಗಿತ್ತು. ಅದಾದ 3 ವರ್ಷಗಳ ನಂತರ 2020ರಲ್ಲಿ ಯೆಮೆನ್ ನ್ಯಾಯಾಲಯವು ಈ ಪ್ರಕರಣದಲ್ಲಿ ಆಕೆಗೆ ಮರಣದಂಡನೆ ಶಿಕ್ಷೆ ವಿಧಿಸಿತು.

LEAVE A REPLY

Please enter your comment!
Please enter your name here