ಉಡುಪಿ: ಕೇರಳಿಯರು ಇಂದು ತಮ್ಮ ಕಲೆ ಮತ್ತು ಸಂಸತಿಯಿಂದಾಗಿ ಪ್ರತಿ ಪ್ರದೇಶದಲ್ಲಿ ಮನೆಮಾತಾಗಿದ್ದಾರೆ. ಅವರ ಶೈಕ್ಷಣಿಕ ಪರಿಶ್ರಮದ ಫಲವಾಗಿ ದೇಶದ ಅತ್ಯುನ್ನತ ಸರ್ಕಾರಿ ಹುದ್ದೆಗಳನ್ನು ಸಹ ಪಡೆಯುವಲ್ಲಿ ಶಕ್ತರಾಗಿದ್ದಾರೆ. ಓಣಂ ಹಬ್ಬ ಪ್ರತಿಯೊಬ್ಬರನ್ನು ಒಗ್ಗೂಡಿಸುವ ಹಬ್ಬವಾಗಿದೆ. ಕೇರಳದ ವಿಶಾಲ ಸಂಸತಿ ಪ್ರತಿಬಿಂಬಿಸುತ್ತದೆ ಎಂದು ಜಿಲ್ಲಾ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣನವರ್ ಹೇಳಿದರು.
ಭಾನುವಾರ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಭಾವನದಲ್ಲಿ ಕೇರಳ ಸಮಾಜಂ ಉಡುಪಿ ವತಿಯಿಂದ ನಡೆದ ಪ್ರಥಮ ಒಣಂ ಸಂಭ್ರಮಾಚರಣೆ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿದ್ದ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಕೇರಳಿಯರು ತಮ್ಮ ಶ್ರದ್ಧೆ ಮತ್ತು ಪರಿಶ್ರಮದಿಂದಾಗಿ ವಿಶ್ವದೆಲ್ಲಡೆ ತಮ್ಮ ಛಾಪನ್ನು ಮೂಡಿಸಿದ್ದಾರೆ. ನಮ್ಮ ನೆರೆಯ ಕೇರಳ ರಾಜ್ಯ ಮತ್ತು ಕರಾವಳಿಜಿಲ್ಲೆಗೆ ಅವಿನಾಭಾವ ಸಂಬಂಧವಿದ್ದು ಹೆಚ್ಚಿನ ಸಂಖ್ಯೆಯ ಕೇರಳಿಯರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಗಾಗಿ ನೆಲೆ ನಿಂತು ಆರ್ಥಿಕ, ಸಾಮಾಜಿಕ ಪ್ರಗತಿಗೆ ತಮ್ಮ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ 2025 ನೇ ಸಾಲಿನ ಜಿಲ್ಲಾ ಶ್ರೇಷ್ಠ ಶಿಕ್ಷಕಿ ಪ್ರಶಸ್ತಿ ಪಡೆದ ಸರಸ್ವತಿ ಟೀಚರ್, ದ್ವೀತಿಯ ಪಿಯುಸಿಯಲ್ಲಿ ವಾಣಿಜ್ಯ ವಿಭಾಗದಲ್ಲಿ 9ನೇ ರಾಂಕ್ ಪಡೆದ ಬಿಬಿನ್ ಬಿಜೋಯ್ , ಗಾಯನದಲ್ಲಿ ವಿಶೇಷ ಸಾಧನೆ ತೋರಿದ ವಿಷ್ಣು ನಂಬಿಯಾರ್ ಅವರನ್ನು ಗೌರವಿಸಲಾಯಿತು. ಪೂಕಳಂ ಸ್ಪರ್ಧೇಯಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಪುರಸ್ಕಾರ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇರಳ ಸಮಾಜಂ ಅಧ್ಯಕ್ಷ ಅರುಣ್ ಕುಮಾರ್ ವಹಿಸಿದ್ದರು.
ಮಾಹೆ ಸಂಸ್ಥೆಯ ಪ್ರೊಫೇಸರ್ ಡಾ. ಸಾಬೂ ಕೆಎಂ ಸುವರ್ಣ, ಸಿನೇಮಾ ತಾರೆ ವಿವೇಕ್ ಗೋಪನ್, ಸೀಮಾ ಜಿ. ನಾಯರ್, ಕಾರ್ಯದರ್ಶಿ ಪ್ರಶಾಂತ್ ಕುಮಾರ್, ಆಚರಣಾ ಸಮಿತಿಯ ಸಂಚಾಲಕಿ ಪ್ರೊ. ಡಾ. ಬಿನ್ಸಿಂ ಎಂ. ಜಾರ್ಜ್ ಉಪಸ್ಥಿತರಿದ್ದರು.