Friday, March 21, 2025
Homeಕಾಸರಗೋಡುಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಅಧ್ಯಕ್ಷರಾಗಿ ವಿರಾಜ್ ಅಡೂರು

ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಅಧ್ಯಕ್ಷರಾಗಿ ವಿರಾಜ್ ಅಡೂರು

ಕಾಸರಗೋಡು : ಕೇರ್ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾಸರಗೋಡಿನ ಸಾಹಿತಿ, ಸಂಘಟಕ ವಿರಾಜ್ ಅಡೂರು ಅಧಿಕಾರ ವಹಿಸಿಕೊಂಡರು. ಕಾಸರಗೋಡಿನ ನುಳ್ಳಿಪ್ಪಾಡಿಯ ಡಾ. ವಾಮನ್ ರಾವ್ ನೇತೃತ್ವದ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ನಡೆದ ಪರಿಷತ್ತಿನ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ ಮಾನಸ ಮೈಸೂರು ಅವರು ಕನ್ನಡ ಧ್ವಜ ಅಧಿಕಾರ ಹಸ್ತಾಂತರ ಮಾಡಿದರು. ಶಿಕ್ಷಣ ತಜ್ಞ ವಿ. ಬಿ. ಕುಳಮರ್ವ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಪರಿಷತ್ತಿನ ಸ್ಥಾಪಕ ಸಂಚಾಲಕ ಡಾ. ವಾಮನ್ ರಾವ್ ಬೇಕಲ್, ಪತ್ರಕರ್ತ, ಸಾಹಿತಿ ಜಯಾನಂದ ಪೆರಾಜೆ, ಶಿಕ್ಷಕಿ ಡಾ. ಶಾಂತ ಪುತ್ತೂರು, ಕಸಾಪ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ನಿವೃತ್ತ ಪ್ರಾಂಶುಪಾಲ ಪ್ರೋ. ಪಿ ಎನ್ ಮೂಡಿತ್ತಾಯ, ನಿವೃತ್ತ ಶಿಕ್ಷಕ ಬಾಲ ಮಧುರಕಾನನ, ಕಾಸರಗೋಡು ಜಿಲ್ಲಾ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ಸಾಮಾಜಿಕ ಮುಖಂಡರಾದ ಡಾ. ಕೆ ಎನ್ ವೆಂಕಟ್ರಮಣ ಹೊಳ್ಳ, ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಸಾಹಿತಿ ರೇಖಾ ಸುದೇಶ್ ರಾವ್, ಕನ್ನಡ ಭವನದ ನಿರ್ದೇಶಕ ಪ್ರೋ. ಎ ಶ್ರೀನಾಥ್, ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ ಮೊದಲಾದವರು ಭಾಗವಹಿಸಿದ್ದರು. ಸುಭಾಷಿಣಿ ಚಂದ್ರ ಕನ್ನಟಿಪ್ಪಾರೆ ಪ್ರಾರ್ಥನೆ ಹಾಡಿದರು.

ಪರಿಷತ್ತಿನ ಕೇಂದ್ರ ಸಮಿತಿಯ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಅವರು ಪರಿಷತ್ತಿನ ಕಾರ್ಯ ಯೋಜನೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕೆ ನರಸಿಂಹ ಭಟ್ ಏತಡ್ಕ ವಂದಿಸಿದರು. ಕಸಾಪ ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಚುಟುಕು ಸಾಹಿತಿ ವಿರಾಜ್ ಅಡೂರು ಅವರ ಅಧ್ಯಕ್ಷತೆಯಲ್ಲಿ ಚುಟುಕು ಕವಿಗೋಷ್ಠಿ ನಡೆಯಿತು. ಸುಮಾರು 22ಕ್ಕೂ ಮಿಕ್ಕಿದ ಕವಿಗಳು ಚುಟುಕು ವಾಚನ ಗೋಷ್ಠಿಯಲ್ಲಿ ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular