ಉಡುಪಿ: ಡೆತ್ ನೋಟ್ ಬರೆದಿಟ್ಟು ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕೊರಂಗ್ರಪಾಡಿಯಲ್ಲಿ ನಡೆದಿದೆ.
ಕೊರಂಗ್ರಪಾಡಿ ನಿವಾಸಿ ವಸಂತ ಕೋಟ್ಯಾನ್(59) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವಸಂತ್ ಅವರು, ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದರು. ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವರು ಬರೆದಿಟ್ಟಿರುವ ಚೀಟಿ ಪೋಲಿಸರಿಗೆ ಲಭ್ಯವಾಗಿದೆ.
ಈ ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.