ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

0
137

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯ ಬಂಧನವಾಗಿದೆ.

ಕೊಡಗಿನ ಅಬ್ದುಲ್ ರಹಮಾನ್ ಕೇರಳದಲ್ಲಿ ಎನ್.ಐ.ಎ. ಬಲೆಗೆ ಬಿದ್ದಿದ್ದು, ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎನ್.ಐ.ಎ.ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ವಿದೇಶಕ್ಕೆ ತೆರಳಿ ಕತಾರ್ ನ ದೋಹಾದಲ್ಲಿ ತಲೆಮರೆಸಿಕೊಂಡಿದ್ದ ಎಲ್ಲಾ ಆರೋಪಿಗಳಿಗಾಗಿ ಲುಕ್ ಔಟ್ ನೋಟೀಸ್ ಕೂಡ ಜಾರಿ ಮಾಡಲಾಗಿತ್ತು. ಅಬ್ದುಲ್ ರೆಹಮಾನ್ ಕಲ್ಕಂದೂರ್ ಹಾಗೂ ತಲೆಮರೆಸಿಕೊಂಡಿರುವ ಇತರರ ಬಗ್ಗೆ, ಮಾಹಿತಿ ನೀಡಿದವರಿಗೆ ನಗದು ಬಹುಮಾನವನ್ನು ಕೂಡ ರಾಜ್ಯ ಗೃಹ ಇಲಾಖೆ ಘೋಷಿಸಿತ್ತು.

ಅಬ್ದುಲ್ ರಹಮಾನ್ ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯದರ್ಶಿಯಾಗಿದ್ದ. ರಹಮಾನನ್ನು ವಶಕ್ಕೆ ಪಡೆದಿರುವ ಎನ್ ಐ ಎ ಅಧಿಕಾರಿಗಳು ಬೆಂಗಳೂರಿನ ಎನ್ ಐ ಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಮತ್ತೆ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here