ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಂಬದಕೋಣೆ ಇದರ ಶಾಲಾ ವಾರ್ಷಿಕೋತ್ಸವ ಸಂಭ್ರಮದಲ್ಲಿ ನಡೆಯಿತು. ಅಂದು ಬೆಳಗ್ಗೆ ಶಾಲಾ ಧ್ವಜಾರೋಹಣವನ್ನು ಪಂಚಾಯತ್ ಉಪಾಧ್ಯಕ್ಷ ಗಣೇಶ ದೇವಾಡಿಗ ನೆರವೇರಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗಮ್ಮ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,
ಪ್ರತಿಯೊಂದು ಶಾಲೆಯು ಉನ್ನತ ಮಟ್ಟ ಬೆಳೆಯ ಬೇಕಾದರೆ ಆ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳು ಪ್ರಮುಖ ಪಾತ್ರ ಮಹತ್ವದ್ದಾಗಿದೆ ಎಂದರು.
ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಮಾತನಾಡಿ, ಮುಂದಿನ ದಿನಗಳಲ್ಲಿ ಕಟ್ಟಡದ ಅಭಿವೃದ್ಧಿಗೆ ಕೈಜೋಡಿಸುವುದಾಗಿ ಭರವಸೆಯನ್ನು ನೀಡಿದರು.
ಶಾಲಾ ಮುಖ್ಯೋಪಾಧ್ಯಾಯರ ಮಹಾಬಲ ಕೆ ಅವರು ಮಾತನಾಡಿ, ಇಷ್ಟೊಂದು ಅದ್ಧೂರಿಯಾಗಿ ಕಾರ್ಯಕ್ರಮ ನಿರ್ವಹಿಸಲು ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದವನ್ನು ಸಮರ್ಪಿಸಿದರು.
ಹಳೆ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಮಾತನಾಡಿ, ಪೋಷಕರು ಹೆಚ್ಚಿನ ಸಂಖ್ಯೆ ಮುಂದಿನ ದಿನಗಳಲ್ಲಿ ಈ ಶಾಲೆಗೆ ವಿದ್ಯಾರ್ಥಿಗಳನ್ನು ಸೇರಿಸಿ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಉದ್ಯಮಿ ಎಚ್ ಜಯಶೀಲ ಶೆಟ್ಟಿಯವರು ಈ ಶಾಲೆಗೆ ನೂತನವಾಗಿ ವಾಹನದ ವ್ಯವಸ್ಥೆಯನ್ನು ಮಾಡಿದ್ದಾರೆ ವಿದ್ಯಾರ್ಥಿಗಳು ಶಾಲೆಗೆ ಬರಲು ಉತ್ತಮ ವ್ಯವಸ್ಥೆವಾಗಿದೆ ಎಂದರು.
ಧನಸಹಾಯ ನೀಡಿದ ದಾನಿಗಳಿಗೆ ಮತ್ತು ಈ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಮತ್ತು ಅಡಿಗೆ ಸಿಬ್ಬಂದಿಯವರಿಗೆ, ಕಲಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಇದೇ ವೇಳೆ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಿದ್ದ ವಿವಿಧ ಸಾಂಸ್ಕೃತಿ ಮತ್ತು ಕ್ರೀಡಾಕೂಟದ ವಿಜೇತರಿಗೆ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಶಾಲಾ ವಾರ್ಷಿಕ ಸಂಚಿಕೆ ಲೇಖನಿ ಈ ಸಂಚಿಕೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಬಿಡುಗಡೆಗೊಳಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಧಾ ಪೂಜಾರಿ ವಹಿಸಿದರು.
ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಮತ್ತು ಅಂಗನವಾಡಿ ಪುಟಾಣಿಗಳಿಂದ ವೈವಿಧ್ಯಮಯ ಮನೋರಂಜನ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಪ್ರಾಥಮಿಕ ಶಿಕ್ಷಕ ಸಂಘದ ಅಧ್ಯಕ್ಷ ಶೇಖರ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಶಾರದಾ ದೇವಾಡಿಗ, ರಾಜೇಶ್ ದೇವಾಡಿಗ, ಸತೀಶ್ ದೇವಾಡಿಗ, ಸುಶೀಲಾ ಬಾಳಿಬೆಟ್ಟು, ಎಸ್ ಡಿ ಎಂ ಸಿ ಉಪಾಧ್ಯಕ್ಷ ಮಂಜುನಾಥ್ ದೇವಾಡಿಗ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗುರುರಾಜ ಹೆಬ್ಬಾರ್, ಮಂಜುನಾಥ ಕಾರಂತ್ ಹೊಳೆ ಬಾಗಿಲು, ಗೌರವಾಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಮಂಜುನಾಥ ಕಾರಂತ್ ಹೊಳೆ ಬಾಗಿಲು, ಶಿಕ್ಷಣ ಸಂಯೋಜಕ ಸತ್ಯನಾ ಕೊಡೇರಿ ಆನಂದ ಜಿ., ವಾಸುದೇವ, ರಾಘವೇಂದ್ರ ನಾಣನಮನೆ, ನಾಗರಾಜ ಕಿರುಕಿಮನೆ ಕೊಡೇರಿ ಮುಂತಾದವರು ಭಾಗವಹಿಸಿದ್ದರು.
ಮುಖ್ಯ ಶಿಕ್ಷಕರಾದ ಮಹಾಬಲ ಕೆ. ವರದಿ ವಾಚಿಸಿ, ನಾಗ ದೇವಾಡಿಗ ಸ್ವಾಗತಿಸಿದರು. ವಿದ್ಯಾರ್ಥಿ ನಾಯಕ ಮನ್ವಿತ್ ಎಸ್. ದೇವಾಡಿಗ ಶಾಲಾ ವಿದ್ಯಾರ್ಥಿ ಸರ್ಕಾರದ ವರದಿ ಶಿಕ್ಷಕಿಯರಾದ ಪದ್ಮಾವತಿ ನಿರೂಪಿಸಿದರು. ನಾಗರತ್ನ ಬಿ ವಂದಿಸಿದರು. ಸರಸ್ವತಿ ಪಿ., ಪಲ್ಲವಿ, ಆಶಿಕಾ, ಸುಶ್ಮಿತಾ ಬಹುಮಾನಿತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಅಕ್ಷತಾ ಎಂ. ಶೆಟ್ಟಿ ಮನೋರಂಜನಾ ನಿರೂಪಿಸಿದರು.