ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾಟ

0
6

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟವು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

ಮಂಗಳೂರಿನ ಕೆನರಾ ಕಾಲೇಜಿನ ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕ ಕಾರ್ತಿಕ್ ಎನ್. ಅವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, “ಖೋ ಖೋ ಕೇವಲ ಮನರಂಜನೆಯ ಆಟವಲ್ಲ. ಇದು ದೈಹಿಕ ಆರೋಗ್ಯ, ಮಾನಸಿಕ ಚುರುಕುತನ, ಶಿಸ್ತು, ಸಹಕಾರ ಹಾಗೂ ಕ್ರೀಡಾಸ್ಫೂರ್ತಿಯನ್ನು ಬೆಳೆಸುವ ಅತ್ಯುತ್ತಮ ಕ್ರೀಡೆಯಾಗಿದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕ ಮುರಳಿಕೃಷ್ಣ ರೈ ವಹಿಸಿದ್ದರು. ಕಾಲೇಜಿನ ಉಪನ್ಯಾಸಕರಾದ ಜ್ಯೋತಿ ಮತ್ತು ದಯಾಮಣಿ ಉಪಸ್ಥಿತರಿದ್ದರು.

ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ತಂಡದ ವಿದ್ಯಾರ್ಥಿಗಳಾದ ತರುಣ್ ಕುಮಾರ್ ಬಿ.ಆರ್., ಸಾತ್ವಿಕ್ ಹಾಗೂ ದೇಶ್ಚಿತ್ ಎಸ್. ಅವರು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಪವನ್ ಕುಮಾರ್ ತರಬೇತಿ ನೀಡಿದ್ದರು.