ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಹೆಬ್ರಿ ತಾಲೂಕು ಮಟ್ಟದ ಖೋ ಖೋ ಪಂದ್ಯಾಟ ವನ್ನು ಅಮೃತ ಭಾರತಿ ಹಾಸ್ಟೆಲ್ ಕಮಿಟಿಯ ಗೌರವಾಧ್ಯಕ್ಷರಾದ ಶ್ರೀಯುತ ಯೋಗೀಶ್ ಭಟ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜೇಶ್ ನಾಯಕ್, ಟ್ರಸ್ಟಿಗಳಾದ ಬಾಲಕೃಷ್ಣ ಮಲ್ಯ, ಸುಧೀರ್ ನಾಯಕ್ , ಹಾಸ್ಟೆಲ್ ಕಮಿಟಿಯ ಸದಸ್ಯರಾದ ರಾಮಕೃಷ್ಣ ಆಚಾರ್ಯ, ಪ್ರಾಂಶುಪಾಲರಾದ ಪ್ರಕಾಶ್ ಜೋಗಿ, ಹೆಬ್ರಿ ತಾಲೂಕು ಕ್ರೀಡಾ ಸಂಯೋಜಕರಾದ ವಿಜಯಕುಮಾರ್ ಶೆಟ್ಟಿ, , ದೈಹಿಕ ಶಿಕ್ಷಣ ನಿರ್ದೇಶಕಿ ಪಾವನ ಶೆಟ್ಟಿ , ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.
ಫಲಿತಾಂಶ :
ಬಾಲಕರ ವಿಭಾಗ :
ಪ್ರಥಮ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಹೆಬ್ರಿ
ದ್ವಿತೀಯ : ಸರಕಾರಿ ಪದವಿಪೂರ್ವ ಕಾಲೇಜು ಹೆಬ್ರಿ
ಬಾಲಕಿಯರ ವಿಭಾಗ :
ಪ್ರಥಮ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪೂರ್ವ ಕಾಲೇಜು ಹೆಬ್ರಿ
ದ್ವಿತೀಯ : ಸರಕಾರಿ ಪದವಿಪೂರ್ವ ಕಾಲೇಜು ಹೆಬ್ರಿ