ಕಿನ್ನಿಗೋಳಿ: ಗದ್ದೆಯಲ್ಲಿನ ಕಳೆಗೆ ಔಷಧ ಸಿಂಪಡಿದುತ್ತಿರುವ ವೇಳೆ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕಿನ್ನಿಗೋಳಿ ಸಮೀಪದ ಏಳಿಂಜೆ ಪಟ್ಟೆಯಲ್ಲಿ ನಡೆದಿದೆ.
ಪಟ್ಟೆ ಮಾದಂಗಡಿ ನಿವಾಸಿ ಅಶೋಕ್ ಶೆಟ್ಟಿ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ರೈತರಾಗಿದ್ದು, ತಮ್ಮ ಗದ್ದೆಯಲ್ಲಿ ಕಳೆ ನಿವಾರಣೆ ಔಷಧಿ ಸಿಂಪಡಿಸುತ್ತಿದ್ದ ವೇಳೆ ಗದ್ದೆಯಲ್ಲೇ ಕುಸಿದುಬಿದ್ದಿದ್ದಾರೆ. ಈ ವೇಳೆ ಅದೇ ದಾರಿಯಲ್ಲಿ ಮಹಿಳೆಯೊಬ್ಬರು ಗಮನಿಸಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಆಗಲಿದ್ದಾರೆ.
ಕಿನ್ನಿಗೋಳಿ: ಗದ್ದೆಯಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು
RELATED ARTICLES