ಕಿನ್ನಿಗೋಳಿ : ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಕರ್ನಾಟಕ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಸುಮಾರು 2.25 ಲಕ್ಷ ಅನುದಾನವನ್ನು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಕಿನ್ನಿಗೋಳಿ ವಾಣಿಜ್ಯ ಸಂಕೀರ್ಣದ ಎದುರು ಆಟೋ ರಿಕ್ಷಾ ಪಾರ್ಕ್ ಗೆ ಮೇಲ್ಚಾವಣಿ ಅಳವಡಿಸಲು ಒದಗಿಸಿದ್ದು ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷರಾದ ಭುವನಾಭಿರಾಮ ಉಡುಪ,ವಸಂತ ಬೆರ್ನಾಡ್ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್, ಮುಲ್ಕಿ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಟಿ.ಎಚ್ ಮೈಯದಿ, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಜಯ ಶಂಕರ್,ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರಾದ ದಾವುದ್ ಕಲ್ಕರೆ, ಕಾರ್ಯದರ್ಶಿ ಸಂತೋಷ್ ಗುತ್ತಕಾಡು, ಸುಭಾಶ್ಚಂದ್ರ, ಆಟೋ ರಿಕ್ಷಾ ಚಾಲಕ ಮಾಲಕರು ಮತ್ತಿತರರು ಉಪಸ್ಥಿತರಿದ್ದರು.ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಶಶಿಕಾಂತ್ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು.