Wednesday, October 9, 2024
Homeಕಿನ್ನಿಗೋಳಿಕಿನ್ನಿಗೋಳಿ :ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಹಾಗೂ ಕನ್ನಡಕ ವಿತರಣಾ ಕಾರ್ಯಕ್ರಮ

ಕಿನ್ನಿಗೋಳಿ :ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಹಾಗೂ ಕನ್ನಡಕ ವಿತರಣಾ ಕಾರ್ಯಕ್ರಮ

ಕಿನ್ನಿಗೋಳಿ : ಜಿಲ್ಲಾ ಪ್ರಶಸ್ತಿ ವಿಜೇತ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ,ಸಾಧನಾ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ಸಂಘ ರತ್ನ ಪ್ರಶಸ್ತಿ ಪುರಸ್ಕೃತ ಶ್ರೀ ವಿನಾಯಕ ಮಿತ್ರ ಮಂಡಳಿ(ರಿ) ಪಕ್ಷಿಕೆರೆ ಇದರ ನೇತೃತ್ವದಲ್ಲಿ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ದ.ಕ, ಕೆಮ್ರಾಲ್ ಗ್ರಾಮ ಪಂಚಾಯತ್ ಪಕ್ಷಿಕೆರೆ, ವೆನ್ಲಾಕ್ ಆಸ್ಪತ್ರೆ ಮಂಗಳೂರು, ಪ್ರಸಾದ್ ನೇತ್ರಲಾಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ಇನ್ನರ್ ವೀಲ್ ಕ್ಲಬ್ ಕಿನ್ನಿಗೋಳಿ, ರೋಟರಿ ಕ್ಲಬ್ ಕಿನ್ನಿಗೋಳಿ, ಚಾಮರ ಫೌಂಡೇಶನ್ (ರಿ ), ಓಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ, ಎಚ್.ಡಿ. ಎಫ್.ಸಿ ಬ್ಯಾಂಕ್, ನಾಗಬ್ರಹ್ಮ ಭಜನಾ ಮಂಡಳಿ ಹೊಸಕಾಡು, ಸೈಂಟ್ ಜೂಡ್ ಅಸೋಸಿಯೇಷನ್ ಪಕ್ಷಿಕೆರೆ, ಕಂಬಳಬೆಟ್ಟು ಫ್ರೆಂಡ್ಸ್ ತೋಕೂರು, ಫ್ರೆಂಡ್ಸ್ ಕ್ಲಬ್ ಅತ್ತೂರು ಕಾಪಿಕಾಡು, ರಿಕ್ಷಾ ಚಾಲಕರ ಮಾಲಕರ ಸಂಘ ಪಕ್ಷಿಕೆರೆ ಮತ್ತು ಚರ್ಚ್ ನಿಲ್ದಾಣ ಹಾಗೂ ಶ್ರೀ ವಿನಾಯಕ ಮಹಿಳಾ ಮಂಡಳಿ ಇವುಗಳ ಸಹಯೋಗದಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಹಾಗೂ ಕನ್ನಡಕ ವಿತರಣಾ ಕಾರ್ಯಕ್ರಮವು ದಿನಾಂಕ 07.07.2024 ರಂದು ಕೆಮ್ರಾಲ್ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು.

ಈ ಕಾರ್ಯಕ್ರಮಕ್ಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಅರ್ಚಕರು ವೇದಮೂರ್ತಿ ಪಂಜ ವಾಸುದೇವ ಭಟ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಮಾಜಿ ದ. ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆಯಾದ ಕಸ್ತೂರಿ ಪಂಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಅಂತೋನಿ ಮುಖ್ಯಸ್ಥರು ಪ್ರಾದೇಶಿಕ ರಕ್ತ ಪುರಾಣ ಕೇಂದ್ರ ಮಂಗಳೂರು ಇವರು ರಕ್ತದಾನದ ಕುರಿತು ಮಾಹಿತಿ ನೀಡಿದರು, ಓಡಿಯೂರು ಗ್ರಾಮ ವಿಕಾಸ ಯೋಜನೆ ಅತ್ತೂರು ನಿರ್ದೇಶಕರಾದ ಕಿರಣ್ ಉರ್ವ ಉಚಿತ ನೇತ್ರ ತಪಾಸಣೆಯ ಬಗ್ಗೆ ಮಾಹಿತಿ ನೀಡಿದರು. ಮಾಜಿ ದ.ಕ ಜಿಲ್ಲಾ ಪಂಚಾಯತ್ ಸದಸ್ಯರಾದ ವಿನೋದ್ ಬೊಳ್ಳೂರು, ಕೆಮ್ರಾಲ್ ಗ್ರಾಮಪಂಚಾಯತ್ ಅಧ್ಯಕ್ಷರಾದ ಮಯ್ಯದಿ ಪಕ್ಷಿಕೆರೆ, ಮಂಡಳಿಯ ಗೌರವಧ್ಯಕ್ಷರು ಹಾಗೂ ರೋಟರಿ ಕ್ಲಬ್ ಕಿನ್ನಿಗೋಳಿ ಅಧ್ಯಕ್ಷರಾದ ಧನಂಜಯ ಪಿ ಶೆಟ್ಟಿಗಾರ್, ಡಾ.ಆದಿತ್ಯ ವೈದ್ಯಧಿಕಾರಿ ವೆನ್ಲಾಕ್, ಡಾ.ಮೇಘನಾ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಗಣಪತಿ ಆಚಾರ್ಯ ಮತ್ತು ಮಂಡಳಿಯ ಅಧ್ಯಕ್ಷರಾದ ರಾಜೇಶ್ ಶೆಟ್ಟಿಗಾರ್, ಕಾರ್ಯದರ್ಶಿ ಮುರಳಿ, ಜಂಟಿ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಸುಮಾರು 90 ದಾನಿಗಳಲ್ಲಿ 72 ರಕ್ತದಾನಿಗಳು ರಕ್ತದಾನ ಮಾಡಿದರು ಹಾಗೂ 110 ಮಂದಿ ಉಚಿತ ಕಣ್ಣಿನ ತಪಾಸಣೆ ಶಿಭಿರದ ಸದುಪಯೋಗ ಪಡೆದುಕೊಂಡರು.

RELATED ARTICLES
- Advertisment -
Google search engine

Most Popular