Thursday, July 25, 2024
Homeಮಂಗಳೂರುಕಿನ್ನಿಗೋಳಿ : ಉಚಿತ ಸಮವಸ್ತ್ರ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

ಕಿನ್ನಿಗೋಳಿ : ಉಚಿತ ಸಮವಸ್ತ್ರ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

ಕಿನ್ನಿಗೋಳಿ : ಶಿಕ್ಷಣಕ್ಕೆ ಒತ್ತು ನೀಡುವ ಸಂಘ-ಸಂಸ್ಥೆಗಳ ಕಾರ್ಯ ಶ್ಲಾಘನೀಯ: ಪ್ರೊ.ಡಾ.ಕೆ.ಬಿ.ಕಿರಣ್
ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ (ರಿ.) ತೋಕೂರು ಹಾಗೂ ಮಹಿಳಾ ಮಂಡಲ (ರಿ.)ತೋಕೂರು ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಸಮವಸ್ತ್ರ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮವು ಯುವಕ ಸಂಘದ ಸುವರ್ಣ ಸಭಾಂಗಣದಲ್ಲಿ ನೆರವೇರಿತು.
ಗ್ರಾಮದ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವ ಇಂತಹ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎನ್.ಐ.ಟಿ.ಕೆ ಸುರತ್ಕಲ್ ಇದರ ಪ್ರೊಫೆಸರ್ ಡಾ.ಕೆ.ಬಿ.ಕಿರಣ್ ಇವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು. ಬಡ್ಡಿ ರಹಿತ ಶೈಕ್ಷಣಿಕ ಸಾಲ ನೀಡಿ ಗ್ರಾಮದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸಹಕರಿಸುತ್ತಿರುವ ಯುವಕ ಸಂಘದ ಕಾರ್ಯವನ್ನು ಹಾಗೂ ಗ್ರಾಮದ ಮಹಿಳೆಯರ ಸಬಲೀಕರಣಕ್ಕಾಗಿ ಮಹಿಳಾ ಮಂಡಲ ನಡೆಸುತ್ತಿರುವ ವಿವಿಧ ಕಾರ್ಯಕ್ರಮಗಳ ಕಾರ್ಯವೈಖರಿಗೆ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಅಭಿಲಾಷ್ ಶೆಟ್ಟಿ ಇವರು ಅಭಿನಂದನೆ ಸಲ್ಲಿಸಿದರು. ಗ್ರಾಮದ 75ಕ್ಕೂ ಮಿಕ್ಕಿ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಪುಸ್ತಕ ವಿತರಿಸಲಾಯಿತು. ಯುವಕ ಸಂಘದ ಅಧ್ಯಕ್ಷರಾದ ರಮೇಶ್ ದೇವಾಡಿಗ ಇವರು ಸ್ವಾಗತಿಸಿದರು .ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪ್ರೇಮಲತಾ ಶೆಟ್ಟಿಗಾರ್ ಇವರು ಧನ್ಯವಾದ ನೀಡಿದರು .ಯುವಕ ಸಂಘದ ಸದಸ್ಯರಾದ ಹೇಮನಾಥ ಅಮೀನ್ ಕಾರ್ಯಕ್ರಮ ನಿರೂಪಿಸಿದರು.

RELATED ARTICLES
- Advertisment -
Google search engine

Most Popular