ಮುಲ್ಕಿ: ತಾಲ್ಲೂಕು ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಿಗ್ಗೆ ಬಿರುಸಿನ ಗಾಳಿ ಸಹಿತ ಭಾರಿ ಮಳೆಯಾಗಿದ್ದು ಕೆಲವೆಡೆ ಹಾನಿ ಸಂಭವಿಸಿದೆ.
ಬಿರುಸಿನ ಗಾಳಿ ಮಳೆಗೆ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾಳಿಪಾಡಿ ಗ್ರಾಮ ಎವುಲಿನ್ ಎಂಬವರ ಮನೆಯ ದನದ ಕೊಟ್ಟಿಗೆಯ ಹಂಚಿನ ಮಾಡು ಸಂಪೂರ್ಣ ಕುಸಿದು ಬಿದ್ದು ಹೆಚ್ಚಿನ ಹಾನಿ ಸಂಭವಿಸಿದೆ
ಸ್ತಳಕ್ಕೆ ಮೂಲ್ಕಿ ತಾಲ್ಲೂಕು ಉಪ ತಹಶೀಲ್ದಾರ್ ದಿಲೀಪ್ ರೋಡ್ಕರ್, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಹೊಸಕಾವೇರಿ ಬಳಿ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದು ಸಂಚಾರ ವ್ಯತ್ಯಯ ಉಂಟಾಯಿತು. ಜೆಸಿಬಿ ಮೂಲಕ ಮರ ತೆರವು ಮಾಡಿ ಸಂಚಾರಕ್ಕೆ ವ್ಯವಸ್ತೆ ಮಾಡಿಕೊಡಲಾಯಿತು. ಮರ ಬಿದ್ದು ವಿದ್ಯುತ್ ಕಂಬಕ್ಕೂ ಹಾನಿ ಉಂಟಾಗಿದೆ.