Monday, December 2, 2024
Homeಮೂಡುಬಿದಿರೆಲಂಚ ಸ್ವೀಕರಿಸುವಾಗಲೇ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್‌ ಇಂಜಿನಿಯರ್‌, ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ!

ಲಂಚ ಸ್ವೀಕರಿಸುವಾಗಲೇ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್‌ ಇಂಜಿನಿಯರ್‌, ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ!

ಮೂಡುಬಿದಿರೆ: ಲಂಚ ಸ್ವೀಕರಿಸುತ್ತಿದ್ದ ವೇಳೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ.
ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರಿಂದ ಬಿಲ್ ಪಾಸ್ ಮಾಡುವ ಸಲುವಾಗಿ ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ವರದಿಯೊಂದು ತಿಳಿಸಿದೆ.
2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿ ಕಾಂಟ್ರಕ್ಟ್ ಕೆಲಸವನ್ನು ಗುತ್ತಿಗೆದಾರರೊಬ್ಬರು ನಿರ್ವಹಿಸಿದ್ದರು. ಈ ಕಾಮಗಾರಿಯ ರೂ 9,77,154 ಮೊತ್ತದ ಬಿಲ್ಲು ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ನಾಗರಾಜು ಬಳಿ ವಿಚಾರಿಸಿದಾಗ ಬಿಲ್ಲು ಪಾಸ್ ಮಾಡಲು ತನಗೆ ರೂ 37,000 ಲಂಚ ನೀಡುವಂತೆ ಮತ್ತು ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಯವರಿಗೆ ರೂ 15,000 ಲಂಚ ನೀಡಬೇಕೆಂದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ ಜೂನಿಯ‌ರ್ ಇಂಜಿನಿಯ‌ರ್ ನಾಗರಾಜುರವರು ಮುಂಚಿತವಾಗಿ ರೂ 7,000 ಹಣ ಪಡೆದುಕೊಂಡಿದ್ದರು.
ಈ ನಡುವೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ನಾಗರಾಜು ರೂ. 30,000 ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯವರು ರೂ 15,000 ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular