ಕಿನ್ನಿಗೋಳಿ: ಸಾರ್ವಜನಿಕ ಶೌಚಾಲಯ ಲೋಕಾರ್ಪಣೆ, ಗ್ರಾಮ ಲೆಕ್ಕಿಗರಿಗೆ ಲ್ಯಾಪ್ಟಾಪ್ ವಿತರಣೆ

0
20

ಕಿನ್ನಿಗೋಳಿ: ಕಿನ್ನಿಗೋಳಿಯ ಬಸ್ಸು ನಿಲ್ದಾಣದ ಪ್ರದೇಶದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ನಿರ್ಮಾಣಗೊಂಡ ಸಾರ್ವಜನಿಕ ಶೌಚಾಲಯವನ್ನು ಜುಲೈ ಹತ್ತರಂದು ಉದ್ಘಾಟಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟನೆಯನ್ನು ನೆರವೇರಿಸಿ ಸಾರ್ವಜನಿಕರಿಗೆ ಉಪಯೋಗವಾಗುವಂತೆ ಈ ಸೌಲಭ್ಯವನ್ನು ಸ್ವಚ್ಛ ಹಾಗೂ ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದರು.
ಅದೇ ರೀತಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ ಗ್ರಾಮಲೆಕ್ಕಿಗರಿಗೆ ಅನುಕೂಲವಾಗುವುದಕ್ಕೆ ಲ್ಯಾಪ್ಟಾಪ್‌ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಸರಕಾರ ನೀಡಿರುವ ಸೌಲಭ್ಯವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಂಡು ಸರಕಾರದ ಕಾರ್ಯಗಳಿಗೆ ಹೆಚ್ಚಿನ ಸಹಕಾರವನ್ನು ನೀಡಬೇಕೆಂದು ವಿನಂತಿಸಿದರು. ತಹಶೀಲ್ದಾರ ಶ್ರೀಧರ್, ಪಟ್ಟಣ ಪಂಚಾಯತ್ ಅಧಿಕಾರಿಗಳು, ಸದಸ್ಯರು, ಸ್ಥಳೀಯ ಮುಖಂಡರುಗಳು ಹಾಜರಿದ್ದರು.

ವರದಿ: ರಾಯಿ ರಾಜಕುಮಾರ ಮೂಡುಬಿದಿರೆ

LEAVE A REPLY

Please enter your comment!
Please enter your name here