ಕಿನ್ನಿಗೋಳಿ:ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಿನ್ನಿಗೋಳಿ ತಾಳಿಪಾಡಿಮಠ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಭೇಟಿ ನೀಡಿದರು.
ಈ ಸಂದರ್ಭ ದೇವಸ್ಥಾನದ ವತಿಯಿಂದ ಸಮಿತಿಯ ಅಧ್ಯಕ್ಷ ದಯಾನಂದ ಭಟ್, ಪ್ರಧಾನ ಕಾರ್ಯದರ್ಶಿ ಕುಶಲ ಪೂಜಾರಿ ಶ್ರೀ ಚಂದ್ರಶೇಖರ ಸ್ವಾಮೀಜಿಯವರನ್ನು ದೇವಸ್ಥಾನದ ವತಿಯಿಂದ ಗೌರವಿಸಿ ಪ್ರಸಾದ ನೀಡಿದರು.
ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ,ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ,ಕಿನ್ನಿಗೋಳಿ ಮಾಜೀ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್, ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು, ಸದಸ್ಯರಾದ ಉದಯ ಪೂಂಜಾ, ಸುದೀಪ್ ಕಿನ್ನಿಗೋಳಿ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಕ್ಷೇತ್ರದ ವತಿಯಿಂದ ನಡೆದ ಬ್ರಹ್ಮಮಂಡಲೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.