ಕಿನ್ನಿಗೋಳಿ: ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ವತಿಯಿಂದ ‘ವಿಶೇಷ ಚೇತನ ಮಕ್ಕಳ ಹಬ್ಬ’

0
10

ಕಿನ್ನಿಗೋಳಿ: ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ವತಿಯಿಂದ ‘ವಿಶೇಷ ಚೇತನ ಮಕ್ಕಳ ಹಬ್ಬ’ ಕಾರ್ಯಕ್ರಮವನ್ನು ನವೆಂಬರ್ 7 ರಂದು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರೂ ಹಾಗೂ ನಿಡ್ಡೋಡಿ ಚಾವಡಿಮನೆ ಡಾ. ಜಗನ್ನಾಥ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಸ್ಥೆಯ ಅಧ್ಯಕ್ಷ ಡಾ. ಜಗನ್ನಾಥ ಶೆಟ್ಟಿ ಚಾವಡಿಮನೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಕಿನ್ನಿಗೋಳಿ ಚರ್ಚ್‌ನ ಧರ್ಮಗುರುಗಳಾದ ರೆ. ಫಾ. ಜೋಕಿಮ್ ಫೆರ್ನಾಂಡಿಸ್ ಅವರು ಉದ್ಘಾಟಿಸಲಿದ್ದಾರೆ.

ಮುಲ್ಕಿ ಸೀಮೆ ದುಗ್ಗಣ್ಣ ಸಾವಂತ ಅರಸರು, ‘ಯುಗಪುರುಷ’ ಸಂಪಾದಕರಾದ ಭುವನಾಭಿರಾಮ ಉಡುಪ, ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ನಿಗಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್‌ನ ಪ್ರಾಂಶುಪಾಲರಾದ ರೇಶ್ಮಾ ಮಾರ್ಟಿಸ್ ಮುಖ್ಯ ಅತಿಥಿಗಳಾಗಿರುವರು.
ಸಂಸ್ಥೆಯ ಟ್ರಸ್ಟಿಗಳು, ವಿಶೇಷ ಮಕ್ಕಳ ಪೋಷಕರು, ಶಿಕ್ಷಕಿಯರು ಹಾಗೂ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಡಾ. ಜಗನ್ನಾಥ ಶೆಟ್ಟಿ ಅವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here