ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆ ಪೂರ್ವಭಾವಿ ಸಭೆ
ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ಸಿಗೆ ಸೇರ್ಪಡೆ
ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆ ಡಿಸೆಂಬರ್ 21ರಂದು ನಡೆಯಲಿದ್ದು, ಪೂರ್ವಭಾವಿಯಾಗಿ ಡಿ.3 ರಂದು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ 18 ವಾರ್ಡಿನ ಕಾರ್ಯಕರ್ತರ ಸಭೆ ಶ್ರೀ ಅಣ್ಣಯ್ಯ ಆಚಾರ್ಯ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ರಾಜ್ಯ ಆರೋಗ್ಯ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್* ಮಾತನಾಡಿ ರಾಜ್ಯದಲ್ಲಿ ಆಡಳಿತವಿರುವ ಕಾಂಗ್ರೆಸ್ ಸರಕಾರ ಜನಪ್ರಿಯ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಕಣ್ಣೀರೊರೆಸುವ ಕೆಲಸ ಮಾಡುತ್ತಿದೆ. ಕಾರ್ಯಕರ್ತರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಸರಕಾರದ ಸಾಧನೆಗಳನ್ನು ತಿಳಿಸಿ ಈ ಬಾರಿ ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ತರಲು ಶ್ರಮಿಸಬೇಕಾಗಿದೆ ಎಂದರು ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈ ಮಾತನಾಡಿ ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರದ ಆಸೆಯಿಂದ ಕ್ಷೇತ್ರದ ಶಾಸಕರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಕಟೀಲು ನ್ನು ಸೇರಿಸಿ ರಾಜಕೀಯ ವಂಚನೆ ಮಾಡಿದ್ದಾರೆ ಹಾಗೆಯೇ ಕಟೀಲು ಮತ್ತು ಎಳತ್ತೂರು ಬಳಿ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಬೆಂಬಲ ನೀಡಿ ನಾಗರಿಕರಿಗೆ ದ್ರೋಹ ಮಾಡಿದ್ದಾರೆ. ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಬಿತುಲ್ ಪರಿಸರದಲ್ಲಿ ಘನ ದ್ರವ ತ್ಯಾಜ್ಯ ಘಟಕದ ಸಮಸ್ಯೆ ನಿವಾರಣೆಯಾಗದೆ ನಾಗರಿಕರು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು. ಅವರು ಮಾತನಾಡಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ನಾಗರಿಕರಿಗೆ ಮೂಲಭೂತ ಸೌಕರ್ಯಗಳ ಜೊತೆಗೆ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡುವುದಾಗಿ ಹೇಳಿದರು. ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ನಾಯಕರಾದ ಶಾಲೆಟ್ ಪಿಂಟೋ, ನವೀನ್ ಚಂದ್ರ ಆಳ್ವ,ಗಿರೀಶ್ ಆಳ್ವ, ಅನಿಲ್ ಕುಮಾರ್, ಪ್ರಮೋದ್ ಕುಮಾರ್ ಕಿನ್ನಿಗೋಳಿ,ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಕೆಪಿಸಿಸಿ ಸದಸ್ಯ ಎಚ್ ವಸಂತ ಬರ್ನಾಡ್ , ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ವಿಲ್ಮಾ ಡಿಸೋಜಾ,ಟಿ ಎಚ್ ಮಯ್ಯದ್ದಿ ಕಿನ್ನಿಗೋಳಿ,ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಿನ್ನಿಗೋಳಿ ಕಟೀಲು ಹಳೆಯಂಗಡಿ ಪರಿಸರದ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಸ್ವಾಗತಿಸಿದರು ಪ್ರಕಾಶ್ ಕಿನ್ನಿಗೋಳಿ ನಿರೂಪಿಸಿದರು.


