ಮುಲ್ಕಿ:ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಹೊಸಕಾವೇರಿ ಬಳಿ ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಗಾಯಗೊಂಡ ಸ್ಕೂಟರ್ ಸವಾರನನ್ನು ಹಳೆಯಂಗಡಿ ಲೈಟ್ ಹೌಸ್ ಬಳಿಯ ನಿವಾಸಿ ಹೈದರಾಲಿ (22) ಗುರುತಿಸಲಾಗಿದೆ.
ಸ್ಕೂಟರ್ ಸವಾರ ಹೈದರ್ ಅಲಿ ಕಿನ್ನಿಗೋಳಿ ಕಡೆಯಿಂದ ಹಳೆಯಂಗಡಿ ಕಡೆಗೆ ತೆರಳುತ್ತಿದ್ದು ಹೊಸಕಾವೇರಿ ಅಪಾಯಕಾರಿ ತಿರುವು ಬಳಿ ಟಿಪ್ಪರ್ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಸ್ಕೂಟರ್ ಟಿಪ್ಪರ್ ನ ಎದುರು ಭಾಗದಲ್ಲಿ ಸಿಲುಕಿಕೊಂಡಿದ್ದು ಸವಾರ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾನೆ.
ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಸ್ಥಳಕ್ಕೆ ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ಧಿ, ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಲಾಗಿದೆ.
ಈ ಭಾಗದಲ್ಲಿ ಅವೈಜ್ಞಾನಿಕ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಡಿದ್ದು ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.