ಕಿರಿಮಂಜೇಶ್ವರ ಪಂಚಾಯತ್ ವ್ಯಾಪಿಯ ಮಕ್ಕಳ ವಿಶೇಷ ಗ್ರಾಮ ಸಭೆ ಇಂದು ಗೋಪಾಲಾ ಕೃಷ್ಣ ಸಭಾಭವನದಲ್ಲಿ ಸಂಭ್ರಮದಿಂದ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ್ ಖಾರ್ವಿ ಕಾರ್ಯಕ್ರಮವು ಉದ್ಘಾಟಿಸಿ ಮಾತನಾಡಿ ಮಕ್ಕಳ ಗ್ರಾಮ ಸಭೆಯ ಮೂಲ ಉದ್ದೇಶ ಮಕ್ಕಳು ಪಂಚಾಯತಿ ವ್ಯವಸ್ಥೆಯ ಬಗ್ಗೆ, ಗ್ರಾಮಗಳ ಅಭಿವೃದ್ಧಿಯ ಬಗ್ಗೆ ಜ್ಞಾನವನ್ನು ವೃದ್ಧಿಸಿಕೊಳ್ಳುವುದಾಗಿದೆ. ಈ ಮೂಲಕ ಮಕ್ಕಳಿಗೆ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಿದಾಗ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಹೊರಹೊಮ್ಮಲಿದ್ದಾರೆ ಎಂದು ಹೇಳಿದರು.
ಗ್ರಾಮ ಪಂಚಾಯತ್ ಪಿಡಿಒ ರಾಜೇಶ್ ಅವರು ಮಾತನಾಡಿ ಮಕ್ಕಳ ಗ್ರಾಮದ ಸಭೆ ಬಹಳ ಅದ್ದೂರಿಯಾಗಿ ನಡೆದಿದೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲವಾರು ಶಾಲೆಗಳು ಭಾಗವಹಿಸಿ ಮಕ್ಕಳಿಗೆ ಆಗುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸೂಕ್ತ ಪರಿಹಾರ ಒದಗಿಸುವುದಾಗಿ ಪಂಚಾಯತ್ ವತಿಯಿಂದ ಭರವಸೆಯನ್ನು ನೀಡಿದರು. ಸ್ವಯಂ ಸೇವಾ ಸಂಸ್ಥೆ ನಮ್ಮಭೂಮಿಯ ಶ್ರೀನಿವಾಸ್ ಗಾಣಿಗ,ಮಾತನಾಡಿ ಪ್ರತಿ ಶಾಲೆಯ ಮಕ್ಕಳು ತಾವು ಎದುರಿಸುತ್ತಿರುವ ಸಮಸ್ಯೆಯನ್ನು ಮುಂದಿಟ್ಟು ಪರಿಹಾರಕ್ಕೆ ಗ್ರಾಮ ಪಂಚಾಯತ್ ಮುಂದಾಗಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರು ಹಾಗೂ ಸರ್ವಸದಸ್ಯರು ಗ್ರಾಮ ಪಂಚಾಯತ್ ಕಿರಿಮಂಜೇಶ್ವರ,ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗ ಗ್ರಾಮ ಪಂಚಾಯತ್ ಕಿರಿಮಂಜೇಶ್ವರ,
ನಮ್ಮ ಭೂಮಿ ಸಂಸ್ಥೆಯ ಅನಿತಾ ಕ್ಷೇತ್ರ ಸಂಯೋಜಕರು, ಹಾಗೂ ನಮ್ಮ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.