ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ನೇಮಕ

0
42

ಉಡುಪಿ: ರಾಜ್ಯದ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಿಸಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರನ್ನು ನೇಮಕ ಮಾಡಲಾಗಿದೆ. ಕಿಶನ್ ಹೆಗ್ಡೆ ಅವರು ಈ ಹಿಂದೆ ಜಿಲ್ಲಾ ಕಾರ್ಯಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ಎರಡೂ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದು, ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಜವಾಬ್ದಾರಿ ನೂತನ ಜಿಲ್ಲಾಧ್ಯಕ್ಷರ ಮೇಲಿದೆ.