ಕೋಡಿಕೆರೆ : ಏಕ ದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮ

0
35

ಮಹಾನಗರ: ಜ.1 ಕನ್ನಡ ಭವನ ದಕ್ಷಿಣ ಕನ್ನಡ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ಪೆರ್ಮುದೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕೋಡಿಕೆರೆ ಕುಳಾಯಿ ಇಲ್ಲಿ ನಡೆಯಿತು.

ಶಿಕ್ಷಕಿ ಹಾಗೂ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ರೇಖಾ ಸುದೇಶ್ ರಾವ್ ಕನ್ನಡ ಶಾಲನ್ನು ಹೊದಿಸಿ ಅತಿಥಿ ಅಭ್ಯಾಗತರನ್ನು ಸ್ವಾಗತಗೈದರು. ಶಾಲಾ ಸಂಚಾಲಕರಾದ ಶ್ರೀಯುತ ರಮೇಶ್ ರಾವ್ ಕಾರ್ಯಕ್ರಮ ದೀಪ ಪ್ರಜ್ವಲನೆಗೈದು ಉದ್ಘಾಟಿಸಿದರು. ಕಾರ್ಯಾಧ್ಯಕ್ಷ ಉಮೇಶ್ ರಾವ್ ಕುಂಬ್ಳೆ ಪ್ರಸ್ತಾಪಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಕ್ಷಮಾ ಗೌರಿ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಂದ ಮಕ್ಕಳ ಕವನ ವಾಚನ ನೆರವೇರಿತು. ಹಾಗೂ ಪೆರ್ಮುದೆ ಶಾಲಾ ವಿಶ್ರಾಂತ ಶಿಕ್ಷಕಿ ಕೃಷ್ಣವೇಣಿ ರಸ ಪ್ರಶ್ನೆ ಕಾರ್ಯಕ್ರಮ ನೆರವೇರಿಸಿದರು.

ಸುಮಾರು 20 ರಷ್ಟು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಕ್ಷಮಾ ಗೌರಿ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷೀಯ ನುಡಿಯಲ್ಲಿ ಕನ್ನಡದ ಬಗೆಗಿನ ಒಲವು, ಮನದಾಳದ ಭಾವ ವ್ಯಕ್ತ ಪಡಿಸಿದರು. ಜಿಲ್ಲಾಧ್ಯಕ್ಷರಾದ ರೇಖಾ ಸುದೇಶ್ ರಾವ್ ಇವರನ್ನು ಮನದಾಳದ ಮಾತುಗಳಿಂದ ಶ್ಲಾಘಿಸಿದರು. ಶಾಲಾ ಶಿಕ್ಷಕಿ ರೇಷ್ಮಾ ನಿರೂಪಣೆಗೈದರು. ರಸ ಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಲಾಯಿತು. ಅತಿಥಿ ಅಭ್ಯಾಗತರನ್ನು ಶಾಲು ಹೊದಿಸಿ ,ಸ್ಮರಣಿಕೆ, ಅಭಿನಂದನಾ ಪತ್ರ, ಪುಸ್ತಕ ನೀಡಿ ಗೌರವಿಸಲಾಯಿತು. ಶಾಲಾ ಶಿಕ್ಷಕಿ ಮಲ್ಲಿಕಾ ವಂದಿಸಿದರು. ಕಾರ್ಯಕ್ರಮವು ರಾಷ್ಟ್ರ ಗೀತೆಯೊಂದಿಗೆ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here