ಕೊಕ್ಕಡ :ಜೂ.9 ಸತತವಾಗಿ 3 ನೇ ಭಾರಿಗೆ ಭಾರತ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಿದ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ದಾಮೋದರದಾಸ್ ಮೋದಿಜೀಯವರ ಅಧಿಕಾರವಾದಿಯಲ್ಲಿ ಆಯುರಾರೋಗ್ಯ ಲಭಿಸಲಿ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಾನದಲ್ಲಿ 120 ಅಗೆಲು ರಂಗಪೂಜೆ ಸೇವೆ ಸಲ್ಲಿಸಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.