Sunday, July 21, 2024
Homeಉಡುಪಿಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ

ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಶಾಲು ಹೊದೆಸಿ ಸನ್ಮಾನಿಸಲಾಯಿತು.

ಬಳಿಕ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಪ್ರಮುಖರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಹರಿಮಕ್ಕಿ ರತ್ನಾಕರ್ ಶೆಟ್ಟಿ, ಗೀತಾಂಜಲಿ ಎಮ್. ಸುವರ್ಣ, ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್, ಶಿವಕುಮಾರ್ ಅಂಬಲಪಾಡಿ, ವಿಜಯ ಕುಮಾರ್ ಉದ್ಯಾವರ, ಪ್ರಥ್ವಿರಾಜ್ ಶೆಟ್ಟಿ, ಸಶಾಂಕ್ ಶಿವತ್ತಾಯ, ರಾಘವೇಂದ್ರ ಉಪ್ಪೂರು, ದಿಲೇಶ್ ಶೆಟ್ಟಿ, ನಳಿನಿ ಪ್ರದೀಪ್ ರಾವ್, ರಶ್ಮಿತಾ ಬಿ. ಶೆಟ್ಟಿ, ಪವಿತ್ರಾ ಶೆಟ್ಟಿ, ಭಾರತೀ ಚಂದ್ರಶೇಖರ್, ವೀಣಾ ಎಸ್. ಶೆಟ್ಟಿ, ಸಚಿನ್ ಪಿತ್ರೋಡಿ, ಸತೀಶ್ ಪೂಜಾರಿ, ದಾವೂದ್ ಅಬೂಬಕರ್, ಲಕ್ಷ್ಮೀಶ ಬಂಗೇರ, ರಘುನಾಥ್, ಸುಭಾಷಿತ್, ವಿಜಯಲಕ್ಷ್ಮಿ, ಮಂಜುಳಾ ಪ್ರಸಾದ್, ಪ್ರೀತಿ ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular