ಕುಂದಾಪುರ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಕೋಟೇಶ್ವರದಲ್ಲಿ ಕುಂದಾಪುರ ಅಬಕಾರಿ ವಿಭಾಗ ಮತ್ತು ಅಗದ ತಂತ್ರ ವಿಭಾಗದ ನೇತೃತ್ವದಲ್ಲಿ ಮಾದಕ ದ್ರವ್ಯಗಳು ಮತ್ತು ಮನೋವಿಕಾರಕ ವಸ್ತುಗಳ ಬಗ್ಗೆ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಡಾ. ಪ್ರಭು ಗೌಡ ಎಂ ಪಾಟೀಲ್, ಅಬಕಾರಿ ಉಪ ಅಧೀಕ್ಷಕರು, ಕುಂದಾಪುರ ಉಪ ವಿಭಾಗ, ಕುಂದಾಪುರ ಇವರು ಮಾತನಾಡುತ್ತ ಮಾದಕ ವಸ್ತುಗಳ ವ್ಯಸನವು ವಿದ್ಯಾರ್ಥಿಗಳ ಆರೋಗ್ಯ, ಶಿಕ್ಷಣ, ಉದ್ಯೋಗ ಹಾಗೂ ಕುಟುಂಬದ ಮೇಲೆ ದುಷ್ಪರಿಣಾಮವನ್ನು ಬೀರುತ್ತದೆ ಹಾಗೂ ಕಾನೂನಾತ್ಮಕವಾಗಿ ಯಾವೆಲ್ಲ ಸಮಸ್ಯೆಗಳು ಉದ್ಭವಿಸುತ್ತದೆ. ಮತ್ತು ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಆರೋಗ್ಯಕರ ಮತ್ತು ಮಾನಸಿಕ ಸಧೃಡ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಬೇಕೆಂದು ಈ ಮೂಲಕ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ ಕೆ.ಎಸ್. ಇವರು ಮಾತನಾಡಿ ಮೆಡಿಕಲ್ ವಿದ್ಯಾರ್ಥಿಗಳಾದ ನೀವು ಮಾದಕ ವ್ಯಸನದ ಅರಿವು ಹೊಂದಿದ್ದು, ಸಮಾಜಕ್ಕೆ ಮಾಹಿತಿ ಮತ್ತು ಜಾಗೃತಿ ನೀಡುವುದು ನಿಮ್ಮ ವೃತ್ತಿಪರ ಜವಬ್ದಾರಿಯಾಗಿರುತ್ತದೆ ಹಾಗೂ ಅದನ್ನು ಅಳವಡಿಸಿಕೊಂಡು ಜೀವನದಲ್ಲಿ
ಮುನ್ನಡೆಯಬೇಕಾಗಿದೆ ಎಂದು ತಿಳಿಸಿದರು.
ತದನಂತರ ವಿದ್ಯಾರ್ಥಿಗಳು ಮಾದಕ ದ್ರವ್ಯಗಳು ಮತ್ತು ಮನೋವಿಕಾರಕ ವಸ್ತುಗಳನ್ನು ಬಳಸುವುದಿಲ್ಲ ಎಂದು ಪ್ರತಿಜ್ಞಾವಿಧಿಯನ್ನು ಕೈಗೊಂಡರು. ಈ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಥೆಯ ಉಪ ಪ್ರಾಂಶುಪಾಲರಾದಡಾ. ಹರಿಪ್ರಸಾದ ಶೆಟ್ಟಿ, ಶರೀರ ಕ್ರೀಯ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀನಿವಾಸ ರಾವ್ ಮತ್ತು ಅಗದ ತಂತ್ರ ವಿಭಾಗದ ಮುಖ್ಯಸ್ಥರಾದ ಡಾ. ಧನ್ಯ ಕೆ.ಯು. ವೇದಿಕೆ ಮೇಲೆ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಾಪಕರು, ಅಧ್ಯಾಪಕೇತರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

