ಬಂಟ್ವಾಳ : ಜನವರಿ 19 ರಂದು ನಡೆಯುವ ಕೋಟಿ ಚೆನ್ನಯ ಕ್ರೀಡೋತ್ಸವದ ಸಮಾಲೋಚನಾ ಸಭೆಯು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಜರುಗಿತು
ಈ ಸಭೆಯಲ್ಲಿ ಬಂಟ್ವಾಳ ತಾಲೂಕಿನ 24 ಬಿಲ್ಲವ ಗ್ರಾಮ ಸಮಿತಿಗಳ ಅಧ್ಯಕ್ಷರು ಹಾಗೂ ಪ್ರತಿನಿಧಿಗಳು ಭಾಗವಹಿಸಿದ್ದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಬಿ ಸಂಜೀವ ಪೂಜಾರಿ ಗುರುಕೃಪಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಕ್ರೀಡೋತ್ಸವ ಸಮಿತಿಯ ಸಂಚಾಲಕ ಬೇಬಿ ಕುಂದರ್, ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಕ್ರೀಡಾಕೂಟದ ಸಂಪೂರ್ಣ ರೂಪುರೇಷೆ, ಸೂಚನೆ ಮತ್ತು ನಿಯಮಗಳನ್ನು ಸಭೆಯ ಮುಂದಿಟ್ಟರು.
ವಿವಿಧ ಬಿಲ್ಲವ ಗ್ರಾಮ ಸಮಿತಿಗಳಿಂದ ಆಗಮಿಸಿದ ಸದಸ್ಯರು ಕ್ರೀಡೋತ್ಸವದ ಯಶಸ್ಸಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಎಂ. ತುಂಬೆ, ಆಂತರಿಕ ಲೆಕ್ಕ ಪರಿಶೋಧಕ ಹೇಮಂತ್ ಕುಮಾರ್ ಮೂರ್ಜೆ, ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್, ಚಂದ್ರಶೇಖರ ಪೂಜಾರಿ, ರಾಮಪ್ಪ ಪೂಜಾರಿ,
ಸಜಿಪಮೂಡ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವ ಅಧ್ಯಕ್ಷ ಸಂಜೀವ ಪೂಜಾರಿ
ಕುಚ್ಚಿಗುಡ್ಡೆ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ ಶೈಲಜಾ ರಾಜೇಶ್, ಕ್ರೀಡೋತ್ಸವ ಸಮಿತಿಯ ಕೋಶಾಧಿಕಾರಿ ಗಣೇಶ್ ಪೂಂಜರೆಕೋಡಿ, ಜತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ, ಕ್ರೀಡೋತ್ಸವದ ಉಪಸಮಿತಿಯ ಸಂಚಾಲಕರು, ಸದಸ್ಯರು, ಗ್ರಾಮಸಮಿತಿಗಳ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.