
ಉಡುಪಿ ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ, ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಸಂಕಲ್ಪದಂತೆ ಲೋಕ ಹಾಗೂ ರಾಷ್ಟ್ರಕ್ಷೇಮಕ್ಕಾಗಿ ಹಮ್ಮಿಕೊಳ್ಳಲಾಗಿದ್ದ “ಶ್ರೀಕೃಷ್ಣನಿಗೆ ಕೋಟಿ ತುಳಸಿ ಅರ್ಚನೆ” ಪುಣ್ಯಕಾರ್ಯವು ಇಂದು ಶ್ರೀ ಕೃಷ್ಣ ಮಠದಲ್ಲಿ ಜರುಗಿತು .

