ಬೆಂಗಳೂರು: ವಿಧಾನ ಪರಿಷತ್ ಸದಸ್ಯತ್ವಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ ನೀಡಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಹೊರಟ್ಟಿ ಅವರಿಗೆ ರಾಜೀನಾಮೆಎ ಪತ್ರ ನೀಡಿದ್ದಾರೆ. ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಪಕ್ಷ ಸೇರ್ಪಡೆ ಕುರಿತಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಸೋಮವಾರ ಮಾತುಕತೆ ನಡೆಸಿದ್ದರು. ನಂಜುಂಡಿ ಅವರ ಸದಸ್ಯತ್ವ ಜೂ. 17ಕ್ಕೆ ಕೊನೆಗೊಳ್ಳಲಿತ್ತು. ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವ ನಂಜುಂಡಿ ರಾಜ್ಯದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಾಗಿ ಇದು ಬಿಜೆಪಿಗೆ ದೊಡ್ಡ ಹಿನ್ನಡೆ ಎಂದು ಭಾವಿಸಲಾಗಿದೆ.