ತೀರ್ಥಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್-ಕಾರು ಅಪಘಾತ : ಮೂವರ ಮೃತ್ಯು

0
13

ತೀರ್ಥಹಳ್ಳಿ (ಶಿವಮೊಗ್ಗ): ಇಲ್ಲಿನ ಭಾರತೀಪುರ ಕೆರೆ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಶೃಂಗೇರಿ ಭಾಗದ ಮೂವರು ಮೃತಪಟ್ಟಿದ್ದಾರೆ.
ಕಿಗ್ಗಾ ಗ್ರಾಮದ ಫಾತಿಮಾ (65) ಹಾಗೂ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಮಗು ಹಾಗೂ ವೃದ್ಧರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ಒಟ್ಟು 6 ಜನ ಪ್ರಯಾಣಿಸುತ್ತಿದ್ದರು. ಮದುವೆ ಕಾರ್ಯಕ್ರಮಕ್ಕೆಂದು ಚನ್ನಗಿರಿಗೆ ತೆರಳಿದ್ದ ಇವರು ಅಲ್ಲಿಂದ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್‌ ತೀರ್ಥಹಳ್ಳಿಯಿಂದ ಬೆಂಗಳೂರಿಗೆ ಹೊರಟಿತ್ತು.

ಮಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here