ರಾಮನಗರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿ,. ಇಬ್ಬರು ಗಂಭೀರವಾ ಗಾಯಗೊಂಡಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಬಳಿ ನಡೆದಿದೆ.
ಮೃತ ಮಕ್ಕಳನ್ನು ತಮಿಳುನಾಡಿನ ಡೆಂಕಣಿಕೋಟೆಯ ಬೋಕಸಂದ್ರ ಗ್ರಾಮದ ಭೈರಪ್ಪ ಎಂಬವರ ಮಕ್ಕಳಾದ ಪ್ರದೀಪ್ (5), ಭವ್ಯ (3) ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದ ಹಿಂದೆ ತಮಿಳುನಾಡಿನಿಂದ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರೊಡನೆ ಇಲ್ಲಿಗೆ ಬಂದು ವಾಸವಾಗಿದ್ದು, ಇಂದು ಬೆಳಗ್ಗೆ ಗೋವಿಂದ ಹಾಗೂ ಮಧು ಎಂಬವರ ಜೊತೆ ಇಬ್ಬರು ಮಕ್ಕಳನ್ನು ಬೈಕ್‌ನಲ್ಲಿ ಸಂಬಂಧಿಕರ ಮನೆಗೆ ಕಳುಹಿಸಿದ್ದಾರೆ.
ಈ ವೇಳೆ ಅಚ್ಚಲುದೊಡ್ಡಿ ಗ್ರಾಮದ ರಸ್ತೆ ತಿರುವಿನಲ್ಲಿ ಬೈಕ್‌ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.