ಕಾರಿಗೆ KSRTC ಬಸ್ ಡಿಕ್ಕಿ : ಸ್ಥಳದಲ್ಲೇ ಮೂವರು ಮೃತ್ಯು

0
33

ಮಂಗಳೂರು : ಶಿರಾಡಿಘಾಟ್​​ನಲ್ಲಿ ಕೆ.ಎಸ್.ಆರ್.ಟಿ.ಸಿ ರಾಜಹಂಸ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಸಕಲೇಶಪುರಕ್ಕೆ ಮದುವೆಗೆ ಹೋಗಿ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಶಿರಾಡಿಘಾಟ್​​​ನ ಗುಂಡ್ಯ ಬಳಿ ಈ ಅಪಘಾತ ನಡೆದಿದೆ. ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇನ್ನು ಈ ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೋರ್ವ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here