ಕಾಪು :ತಾಲೂಕಿನ ಪೈಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಯಲ್ಲಿ 33 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಸಂಸ್ಥೆಯ ಪೇದೆ ನಾರಾಯಣರವರಿಗೆ ಸನ್ಮಾನ ಸಮಾರಂಭ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರು ಶ್ರೀ ಗುರ್ಮೆ ಸುರೇಶ್ ಶೆಟ್ಟಿ, ವಿಧ್ಯಾವರ್ಧಕ ಸಂಘದ ಸಂಚಾಲಕರಾದ ಶಿವರಾಮ ಶೆಟ್ಟಿ, ವಿಧ್ಯಾವರ್ಧಕ ಸಂಘ ಪಿ.ಕೆ.ಎಸ್ ಪ್ರೌಢಶಾಲೆ ಅಧ್ಯಕ್ಷರಾದ ನಿತ್ಯಾನಂದ ಆರ್ ಶೆಟ್ಟಿ, ವಿಧ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಗುರ್ಮೆ, ಸದಸ್ಯರಾದ ವೇಣುಗೋಪಾಲ ಎಂ, ಲವ ಶೆಟ್ಟಿ, ಗೋಪಾಲಕೃಷ್ಣ ಭಟ್, ಯೋಗೀಶ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಶೆಟ್ಟಿ ಪೈಯಾರು, ಮುಖ್ಯ ಶಿಕ್ಷಕರಾದ ಗಂಗಾ ನಾಯ್ಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.