ಪೊಂಪೈ ಕಾಲೇಜು ಐಕಳ ಇಲ್ಲಿ ಐ ಕ್ಯೂ ಸಿ, ವಿದ್ಯಾರ್ಥಿ ಕ್ಷೇಮಪಾಲನ ಸಮಿತಿ , ಎನ್. ಎಸ್. ಎಸ್ ಸಹಯೋಗದೊಂದಿಗೆ ಶಿಕ್ಷಕರ ದಿನವನ್ನು ಕಾಲೇಜಿನ ಪ್ರೊವಿಡೆನ್ಸ್ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಟೀಲು ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಶ್ರೀ ಉಮೇಶ್ ರಾವ್ ಇವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು ಶಿಕ್ಷಣದಿಂದ ವಿದ್ಯಾರ್ಥಿಗಳಲ್ಲಿ ಆದರ್ಶ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ರೊಟೊರಿಯನ್ ದೇವಿದಾಸ್ ಶೆಟ್ಟಿ ಇವರು ಮಾತನಾಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ ಪುರುಷೋತ್ತಮ ಕೆ ವಿ ಇವರು ವಹಿಸಿದರು. ಅತಿಥಿ ಗಣ್ಯರಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರಿಗೆ ಗೌರವಾರ್ಪಣೆಯನ್ನು ಸಲ್ಲಿಸಲಾಯಿತು. ಸನ್ಮಾನಿತರ ಸನ್ಮಾನ ಪತ್ರವನ್ನು ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಶ್ರೀಮತಿ ಆಶಿತಾ ಜೆ ಇವರು ವಾಚಿಸಿದರು. ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಅಮೃತ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಧನ್ಯಶ್ರೀ ಸ್ವಾಗತಿಸಿದರು. ದ್ವಿತೀಯ ಬಿಕಾಂ ವಿದ್ಯಾರ್ಥಿ ಶಶಿಧರ್ ಇವರು ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ಸಮಿತಿಯ ಸಂಯೋಜನಾಧಿಕಾರಿ ಡಾ. ವಿಕ್ಟರ್ ವಾಜ್, ಐ. ಕ್ಯೂ ಎ.ಸಿ ಸಂಯೋಜಕರು ಡಾ ಗುಣಕರ್ ಎಸ್, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಪೃಥ್ವಿರಾಜ್. ಬಿ ಎನ್. ಎಸ್ ಎಸ್ ಸಹ ಕಾರ್ಯಕ್ರಮಾಧಿಕಾರಿ ಶ್ರೀಮತಿ ಆಶಾಲತಾ ಕೆ ಜಿ ಮತ್ತು ವಿದ್ಯಾರ್ಥಿಗಳು ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.