ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಭಾರತೀಯ ಜೀವ ವಿಮಾ ನಿಗಮ ಶಾಖೆಯಿಂದ ಗುಂಡೆಸೆತ ಕ್ರೀಡಾ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡ ಸಿಬ್ಬಂದಿ ಮಂಜು ಇವರನ್ನು ಅಭಿವೃದ್ಧಿ ತಂಡದ ವಿಮಾ ಪ್ರತಿನಿಧಿಗಳ ವತಿಯಿಂದ ಬಿ.ಸಿ.ರೋಡು ಲಯನ್ಸ್ ಸಭಾಂಗಣದಲ್ಲಿ ಶನಿವಾರ ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಡಾ.ವಸಂತ ಬಾಳಿಗಾ, ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಕಲ್ಮಾಡಿ, ತರಬೇತುದಾರ ಸುಧೀಂದ್ರ ಅಡಿಗ ಮತ್ತಿತರರು ಉಪಸ್ಥಿತರಿದ್ದರು.