Thursday, July 25, 2024
Homeರಾಜ್ಯಧಾರಾಕಾರ ಮಳೆ | ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ; ನದಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ

ಧಾರಾಕಾರ ಮಳೆ | ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ; ನದಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆಯ ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಹೀಗಾಗಿ ಸ್ನಾನ ಘಟ್ಟಕ್ಕೆ ಇಳಿಯದಂತೆ ದೇವಸ್ಥಾನ ಆಡಳಿತ ಭಕ್ತರಿಗೆ ನಿರ್ದೇಶಿಸಿದೆ. ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್‌ ಗಾರ್ಡ್ಸ್‌ ನಿಯೋಜಿಸಲಾಗಿದೆ.
ಕುಮಾರಪರ್ವತ, ಘಟ್ಟಪ್ರದೇಶ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಇಲ್ಲಿನ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಿದೆ. ಕುಮಾರಧಾರ ಉಪನದಿ ದರ್ಪಣ ತೀರ್ಥ ಕೂಡ ತುಂಬಿ ಹರಿಯುತ್ತಿದೆ.

RELATED ARTICLES
- Advertisment -
Google search engine

Most Popular