ಮಂಗಳೂರು: ಮಂಗಳೂರು ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗದಲ್ಲಿ ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಕ್ಯಾಂಟರ್ ಲಾರಿ ಹರಿದು, ಉಡುಪಿ ಪರ್ಕಳ ಮೂಲದ ಮಹಿಳೆಯೊಬ್ಬರು ಮೃತಪಟ್ಟಿರುವ ಭೀಕರ ಘಟನೆ ನಡೆದಿದೆ.
ಮೃತಪಟ್ಟ ಮಹಿಳೆ ಉಡುಪಿಯ ಪರ್ಕಳ ಮೂಲದ ಮಾಧವಿ. ಮಂಗಳೂರಿನ ಎ.ಜೆ.ಆಸ್ಪತ್ರೆಯ ಸಿಬ್ಬಂದಿಯಾಗಿರುವ ಮಾಧವಿ, ಕರ್ತವ್ಯಕ್ಕೆ ಹಾಜರಾಗಲು ದ್ವಿಚಕ್ರ ವಾಹನದಲ್ಲಿ ಆಗಮಿಸುತ್ತಿದ್ದರು. ದ್ವಿಚಕ್ರ ವಾಹನವು ರಸ್ತೆ ಹೊಂಡಕ್ಕೆ ಬಿದ್ದ ಪರಿಣಾಮ ಮಾಧವಿ ರಸ್ತೆಗೆ ಬಿದ್ದಿದ್ದರು. ಈ ವೇಳೆ ಹಿಂದಿನಿಂದ ಬಂದ ಕ್ಯಾಂಟರ್ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಗಳು ಹೊಂಡಗುಂಡಿಗಳಿಂದ ತುಂಬಿದ್ದು, ಇದನ್ನು ದುರಸ್ಥಿ ಮಾಡದ ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ.

