ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು, ನಿಟ್ಟಡೆ–ವೇಣೂರು ಇಲ್ಲಿನ 9ನೇ ತರಗತಿಯ ಕುಮಾರಿ ಸಾನ್ವಿ ಅವರು ಕಾರ್ಕಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಭಯ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಸಾನ್ವಿ ಅವರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ.ಎಚ್, ಸಂಚಾಲಕರಾದ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಯಶಸ್ಸು ದೊರೆಯಲಿ ಎಂದು ಶುಭ ಹಾರೈಸಿದರು.
ಈ ಸಾಧನೆಗೆ ಮಾರ್ಗದರ್ಶನ ಹಾಗೂ ಸಹಕಾರ ನೀಡಿದ ಕುಂಭಶ್ರೀ ಶಾಲೆಯ ಚಿತ್ರಕಲಾ ಶಿಕ್ಷಕಿ ಕುಮಾರಿ ಯಕ್ಷಿಣಿ ಅವರಿಗೂ ಸಂಸ್ಥೆಯ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು

