ನವದೆಹಲಿ: ʻಮುಡಾʼ ನಿವೇಶನ ಹಂಚಿಕೆ ಅಕ್ರಮದ ವಿರುದ್ಧ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ವಾಪಾಸ್ ಪಡೆದಿದೆ. ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕಾ? ಎಂದು ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಬಿಜೆಪಿ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡಿದೆ. ಇದಕ್ಕೆ ಜೆಡಿಎಸ್‌ನಿಂದ ನೈತಿಕ ಬೆಂಬಲವೂ ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಪ್ರೀತಂ ಗೌಡ ಯಾರು? ಹಾಸನದಲ್ಲಿ ಬೀದಿ ಬೀದಿಗಳಲ್ಲಿ ಪೆನ್‌ಡ್ರೈವ್ ಸಿಗಲು ಕಾರಣನಾದ ವ್ಯಕ್ತಿ ಆತ. ಆತನ ಜೊತೆಗೆ ನಾನು ವೇದಿಕೆ ಹಂಚಿಕೊಳ್ಳಬೇಕಾ? ನಮ್ಮ ಕುಟುಂಬದಲ್ಲಿ ವಿಷ ಹಾಕಿದವರ ಜೊತೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕಾ? ಎಂದು ಕುಮಾರಸ್ವಾಮಿ ಕಿಡಿಗಾರಿದ್ದಾರೆ.