ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟ : ವಿದ್ಯಾರಣ್ಯ ವಿದ್ಯಾರ್ಥಿಗೆ ಎರಡು ಚಿನ್ನದ ಪದಕ- ಜಿಲ್ಲಾ ಮಟ್ಟಕ್ಕೆ ಆಯ್ಕೆ

0
13

ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಕಚೇರಿ ಮತ್ತು ವಕ್ವಾಡಿ ಸರಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಆಯೋಜಿಸಿದ್ದ ಕುಂದಾಪುರ ತಾಲೂಕು ಮಟ್ಟದ ಪ್ರಸಕ್ತ ಸಾಲಿನ ಕ್ರೀಡಾಕೂಟ ಅ. 30ರಂದು ನಡೆಯಿತು. ಕ್ರೀಡಾಕೂಟದಲ್ಲಿ 17ರ ವಯೋಮಾನದ ಬಾಲಕರ ಗುಂಡು ಎಸೆತ ಮತ್ತು ಜಾವೆಲಿನ್ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸೂರ್ಯಪ್ರಕಾಶ್ ಪ್ರಥಮ ಸ್ಥಾನ ಗಳಿಸಿ ಎರಡು ಚಿನ್ನದ ಪದಕದೊಂದಿಗೆ ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿಜೇತ ವಿದ್ಯಾರ್ಥಿಯು ಕಟ್ಕೇರಿ ಭಾಸ್ಕರ ರಾಮ ಗಾಣಿಗ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರ.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ಮಾರ್ಗದರ್ಶನ ನೀಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ಮತ್ತು ಕುಮಾರಿ ಕಾವ್ಯ ಶೆಟ್ಟಿ ತಂಡ ವ್ಯವಸ್ಥಾಪಕರಾಗಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here