ಕಾರ್ಕಳದಲ್ಲಿ ನ.27ರಂದು ದೊಂದಿಯ ಬೆಳಕಿನಲ್ಲಿ ಕುಣಿತ ಭಜನೆ

0
27

ಕಾರ್ಕಳದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುವ ಉದ್ದೇಶದಿಂದ ನವೆಂಬರ್ 27ರಂದು ಸಂಜೆ 6 ಗಂಟೆಯಿಂದ ಗಾಂಧಿ ಮೈದಾನದಲ್ಲಿ ದೊಂದಿಯ ಬೆಳಕಿನಲ್ಲಿ ಕುಣಿತ ಭಜನೆ’ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಕಳದ ಅಂಬಾಭವಾನಿ ಕ್ರ್ಯಾಕರ್ಸ್ ಹಾಗೂ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ.) ಕಾರ್ಕಳದ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ದೀಪಾವಳಿ ಸಂಭ್ರಮದ ಸಂದರ್ಭದಲ್ಲಿ ಪಟಾಕಿ ಮಾರಾಟದಿಂದ ಬಂದ ಲಾಭಾಂಶದ ಒಂದು ಭಾಗವನ್ನು ಸಮಾಜಸೇವೆಗೆ ಮೀಸಲಿಡಲಾಗುತ್ತಿದೆ. ಅದರಂತೆ ಈ ಬಾರಿ ವಿದ್ಯಾರ್ಥಿಗಳಿಗೆ ವೇತನ ವಿತರಣೆ ಮಾಡುವುದರ ಜೊತೆಗೆ ಕುಣಿತ ಭಜನೆ ತಂಡಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಾರ್ಯಕ್ರಮ ರೂಪಿಸಲಾಗಿದೆ.

ಭಕ್ತಿಯ ಭಾವವನ್ನು ಬೆಸೆಯುವ ಹಾಗೂ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ನೆರವಾಗುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.