Wednesday, October 9, 2024
HomeUncategorizedಕುಪ್ಪೆಪದವು ವನಮಹೋತ್ಸವ: ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆಗೆ ಚಾಲನೆ

ಕುಪ್ಪೆಪದವು ವನಮಹೋತ್ಸವ: ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆಗೆ ಚಾಲನೆ

ಬಜಪೆ: ಪ್ರಕೃತಿಯ ಉಳಿವಿನ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕಾದ ಕಾರ್ಯದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶಿಕ್ಷಕ ಮಾರ್ಕ್ ಮೆಂಡೋನ್ಸಾ ಹೇಳಿದರು.ಅವರು ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆ ಕುಪ್ಪೆಪದವು ಮತ್ತು ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ (ರಿ.) ಕುಪ್ಪೆಪದವು ಘಟಕ ಇವರ ಜಂಟಿ ಆಶ್ರಯದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯುವವಾಹಿನಿ (ರಿ.) ಕುಪ್ಪೆಪದವು ಘಟಕದ ಅಧ್ಯಕ್ಷ ಅಕ್ಷಿತ್ ಕುಮಾರ್ ಮತ್ತು ಶಾಲಾ ನಾಯಕಿ ಕು. ಸಾನ್ವಿ ಅವರು ಶಾಲಾ ಪರಿಸರದಲ್ಲಿ ಹಣ್ಣಿನ ಗಿಡವನ್ನು ನೆಡುವುದರ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಈ ಸಂದರ್ಭ ಸ್ಥಾಪಕ ಅಧ್ಯಕ್ಷ ಅರುಣ್ ಕುಮಾರ್ ಅಂಬೆಲೊಟ್ಟು, ಮಾಜಿ ಅಧ್ಯಕ್ಷ ಅಜಯ್ ಅಮೀನ್ ನಾಗಂದಡಿ, ಸತೀಶ್ ಕೆ. ಎಂ., ಜಗದೀಶ್ ದುರ್ಗಾಕೊಡಿ, ಕಾರ್ಯದರ್ಶಿ ಶ್ರೀಮತಿ ರೇಣುಕಾ ನಿಕಟಪೂರ್ವ ಅಧ್ಯಕ್ಷೆ ಸೌಮ್ಯಾ ಕೋಟ್ಯಾನ್, ಪರಿಸರ ಪ್ರೇಮಿ ವಿನೇಶ್ ಪೂಜಾರಿ ನಿಡ್ಡೋಡಿ (ಅರಣ್ಯ ಸಂರಕ್ಷಕ) ಮತ್ತು ಯುವವಾಹಿನಿ ಪದಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತಿರಿದ್ದರು.

RELATED ARTICLES
- Advertisment -
Google search engine

Most Popular