ಉಡುಪಿ: ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಮಾರಂಭಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿ ರುವ, ಶ್ರೀ ರಮಾನಂದ ಗುರೂಜಿಯವರ ಆಡಳಿತದಲ್ಲಿ ಕಾರ್ಯಾಚರಿಸುತ್ತಿರುವ ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಉಸ್ತುವಾರಿ, ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯ ಸಂಯೋಜಕಿ ಕುಸುಮಾ ನಾಗರಾಜ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಆಯೋಜಿಲ್ಪಟ್ಟ ‘ಭೀಷ್ಟೋತ್ಸವ’ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಕಸಾಪ ಪುರಸ್ಕಾರ’ ನೀಡಿ ಗೌರವಿಸಲಾಯಿತು.
ಸಮ್ಮೇಳನ ಅಧ್ಯಕ್ಷಡಾ। ಭಾಸ್ಕರಾನಂದ ಕುಮಾ ನಳಿನಿ ಭಾಸ್ಕರಾನಂದ, ವಿಶ್ವನಾಥ ಶೆಣೈ, ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ. ಹರಿಶ್ಚಂದ್ರ, ಕಸಾಪ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ., ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಡಾ| ಗಣನಾಥ ಎಕ್ಕಾರು, ಡಾ| ಸುಬ್ರಹ್ಮಣ್ಯ ಭಟ್, ಸತೀಶ್ ಕೊಡವೂರು, ಪೂರ್ಣಿಮಾ ಜನಾರ್ದನ್, ಆರ್. ವಸಂತ್, ರಾಜೇಶ್ ಭಟ್ ಪಣಿಯಾಡಿ, ರಾಘವೇಂದ್ರ ಪ್ರಭು ಕರ್ವಾಲು, ಪದ್ಮಾಸಿನಿ, ಸಿದ್ದಬಸಯ್ಯಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು.
