ನವದೆಹಲಿ: ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ದೈನಂದಿನ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಜೂ. 27ರಂದು ಅಡ್ವಾಣಿ ಅವರ ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ಬಳಿಕ ಅವರು ಮನೆಗೆ ಹಿಂದಿರುಗಿದ್ದರು.
ಅಪೋಲೊ ಆಸ್ಪತ್ರೆಯ ನರರೋಗ ತಜ್ಞ ಡಾ. ವಿನೀತ್ ಪುರಿ ಅವರು ಅಡ್ವಾಣಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.