ಮಣಿಪಾಲ: ಆ್ಯಪ್ ಡೌನ್‌ಲೋಡ್ ಮಾಡಿದ ವ್ಯಕ್ತಿಯೊಬ್ಬರು ಲಕ್ಷಾಂತರ ರೂ.ಕಳೆದುಕೊಂಡಿದ್ದು ಪ್ರಕರಣ ದಾಖಲಿಸಿದ್ದಾರೆ.
ಮಣಿಪಾಲದ ಉಮಾಕಾಂತ್ ಸಿಂಗ್ ಅವರಿಗೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಬಗ್ಗೆ ಒಂದು ಸಂದೇಶ ಬಂದಿತ್ತು. ಅದರಂತೆ ಅವರು ಆ ಸಂಖ್ಯೆಗೆ ಕರೆಮಾಡಿದಾಗ ಆರೋಪಿಯು ಅದಕ್ಕೆ ಸಂಬಂಧಿಸಿ ಒಂದು ಅರ್ಜಿಯನ್ನು ಭರ್ತಿ ಮಾಡಲು ಆ್ಯಪ್ ಒಂದನ್ನು ಡೌನ್‌ಲೋಡ್ ಮಾಡುವಂತೆ ತಿಳಿಸಿದ್ದಾನೆ.
ಅದರಂತೆ ಡೌನ್‌ಲೋಡ್ ಮಾಡಿ ಅದನ್ನು ತುಂಬಿಸುವ ವೇಳೆಯೇ ಅವರ ಅಕೌಂಟ್‌ನಿಂದ 1,69,950 ರೂ.ಗಳು ಅಪರಿಚಿತ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.