ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಅಧ್ಯಕ್ಷರಾಗಿ ಶ್ರೀಮತಿ ಲಲಿತಾ ಕಲ್ಲೇಶ್ ಪುನರಾಯ್ಕೆ ಆಗಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಕಲಾಕುಂಚ ಕಛೇರಿ ಸಭಾಂಗಣದಲ್ಲಿ ಇತ್ತೀಚಿಗೆ ಸೇರಿದ ಸಭೆಯಲ್ಲಿ ಸರ್ವ ಸದಸ್ಯರ ಅಭಿಪ್ರಾಯದೊಂದಿಗೆ ಪ್ರಧಾನ ಕಾರ್ಯದರ್ಶಿಯಾಗಿ ಸುಮಾ ಏಕಾಂತಪ್ಪ, ಖಜಾಂಚಿಯಾಗಿ ಸಂಧ್ಯಾ ಶ್ರೀನಿವಾಸ್, ಸಂಚಾಲಕರಾಗಿ ಸುಚಿತ್ರಾ ಗಣೇಶ್‌ರಾವ್, ಸಂಘಟನಾ ಕಾರ್ಯದರ್ಶಿಯಾಗಿ ಲೀಲಾ ಸುಭಾಷ್, ಸಮಿತಿ ಸದಸ್ಯರಾಗಿ ಲಕ್ಷ್ಮೀ ಮಲ್ಲನಗವಡ್ರು, ರೇಣುಕಾ ರಾಮಣ್ಣ ಅಯ್ಕೆಯಾಗಿದ್ದಾರೆ ಎಂದು ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ ಪ್ರಕಟಿಸಿದ್ದಾರೆ.
ಈ ಸರ್ವ ಸದಸ್ಯರ ಸಭೆಯಲ್ಲಿ ಎಂ.ಸಿ.ಸಿ.ಶಾಖೆಯ ಅಧ್ಯಕ್ಷರಾದ ಪ್ರಭಾ ರವೀಂದ್ರ, ಕಲಾಕುಂಚ ಮಹಿಳಾ ವಿಭಾಗದ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಅಡಿಗ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್, ಸಮಿತಿ ಸದಸ್ಯರಾದ ಪ್ರೇಮಾ ಮಹೇಶ್ವರಯ್ಯ, ಶೈಲಜಾ ಪ್ರಶಾಂತ್, ಶಿಲ್ಪಾ ಉಮೇಶ್, ಪೂರ್ಣಿಮಾ ಲೋಹಿತಾಶ್ವ, ಪುಷ್ಪಾ ಮಂಜುನಾಥ್, ಮುಂತಾದವರು ಉಪಸ್ಥಿತರಿದ್ದರು.

