Saturday, July 20, 2024
Homeರಾಜ್ಯಮಗಳಿಗೆ ಜಮೀನು ಕೊಡುವುದಾಗಿ ಹೇಳಿದ್ದಕ್ಕೆ ತಾಯಿಯ ಹತ್ಯೆ: ಮಗ ಬಂಧನ

ಮಗಳಿಗೆ ಜಮೀನು ಕೊಡುವುದಾಗಿ ಹೇಳಿದ್ದಕ್ಕೆ ತಾಯಿಯ ಹತ್ಯೆ: ಮಗ ಬಂಧನ

ತುಮಕೂರು: ಮಗಳ ಹೆಸರಿಗೆ ಆಸ್ತಿ ವರ್ಗಾಯಿಸುವುದಾಗಿ ಹೇಳಿದ ತಾಯಿಯನ್ನು ವ್ಯಕ್ತಿಯೊಬ್ಬ ಹತ್ಯೆ ಮಾಡಿದ ಘಟನೆ ನಡೆದಿದೆ. ಪಾವಗಡದ ಮಾಚಮಾರನಹಳ್ಳಿಯಲ್ಲಿ ನಡೆದಿದೆ. ಚಂದ್ರಕ್ಕ ಕೊಲೆಯಾದ ಮಹಿಳೆ.
ಮಹಿಳೆಯ ಹತ್ಯೆ ಜೂ. 20ರಂದು ನಡೆದಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಹಿಳೆಯ ಮಗ ಆಂಜನೇಯಲು ಹಾಗೂ ಆತನ ಬಾವ ಪ್ರಭಾಕರನನ್ನು ಬಂಧಿಸಿದ್ದಾರೆ. ಆಸ್ತಿ ವಿಚಾರಕ್ಕೆ ಕೊಲೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಂದ್ರಕ್ಕ ಬೇವಿನ ಬೀಜ ಸಂಗ್ರಹಿಸಲು ತೆರಳಿದ್ದ ವೇಳೆ ಮಹಿಳೆಯನ್ನು ಕತ್ತುಕೊಯ್ದು ಹತ್ಯೆ ಮಾಡಲಾಗಿತ್ತು. ತನ್ನ ತಾಯಿಯ ಹಂತಕರನ್ನು ಬಂಧಿಸಿ ಎಂದು ಸ್ವತಃ ಹಂತಕ ಮಗನೇ ಪಾವಗಡ ಪೊಲೀಸರಿಗೆ ದೂರು ನೀಡಿದ್ದ. ಪೊಲೀಸ್‌ ತನಿಖೆ ವೇಳೆ ಚಂದ್ರಕ್ಕನ ಮಗ ಆಂಜನೇಯಲುನೇ ಕೊಲೆಗಾರ ಎಂಬುದು ಪತ್ತೆಯಾಗಿದೆ.

RELATED ARTICLES
- Advertisment -
Google search engine

Most Popular