Sunday, July 14, 2024
Homeಮಂಗಳೂರುಮಂಗಳೂರು | ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂ ಕುಸಿತ; ಅವಶೇಷಗಳಡಿ ಸಿಲುಕಿದ ಕಾರ್ಮಿಕರು

ಮಂಗಳೂರು | ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂ ಕುಸಿತ; ಅವಶೇಷಗಳಡಿ ಸಿಲುಕಿದ ಕಾರ್ಮಿಕರು

ಮಂಗಳೂರು: ನಗರದ ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂ ಕುಸಿತ ಸಂಭವಿಸಿ, ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ. ಬುಧವಾರ ಈ ಘಟನೆ ನಡೆದಿದ್ದು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ಅಗ್ನಿಶಾಮಕ ದಳ, ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌ ಪಡೆಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಆರಂಭವಾಗಿದೆ. ಇಬ್ಬರು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದೆ. ಬಲ್ಮಠ ರಸ್ತೆ ಬದಿಯಲ್ಲಿ ಖಾಸಗಿ ಕಟ್ಟಡ ನಿರ್ಮಾಣ ಸಂಸ್ಥೆಗೆ ಸೇರಿದ ಜಾಗ ಇದು ಎಂದು ತಿಳಿದು ಬಂದಿದೆ.
ಅವಶೇಷಗಳಡಿ ಸಿಲುಕಿರುವ ಕಾರ್ಮಿಕರು ಮಾತನಾಡುತ್ತಿದ್ದಾರೆ ಎನ್ನಲಾಗಿದ್ದು, ಪ್ರಾಣಾಪಾಯದಿಂದ ಪಾರಾಗುವ ನಿರೀಕ್ಷೆಯಿದೆ. ರಿಟೇನಿಂಗ್‌ ವಾಲ್‌ ಮತ್ತು ಶೀಟ್‌ ನಡುವೆ ಕಾರ್ಮಿಕರು ಸಿಲುಕಿದ್ದಾರೆ. ಕೋರ್‌ ಕಟ್ಟಿಂಗ್‌ ಮೂಲಕ ರಕ್ಷಣಾ ಕಾರ್ಯ ನಡೆಯುತ್ತಿದೆ.


ಸುಮಾರು 60 ಮಂದಿ ಇಲ್ಲಿ ಕೆಲಸ ಮಾಡುತ್ತಿದ್ದು, ಅವರಲ್ಲಿ ಇಬ್ಬರು ಅವಶೇಷಗಳಡಿ ಸಿಲುಕಿದ್ದಾರೆ. ಕಬ್ಬಿಣದ ಫ್ರೇಮ್‌ ಒಳಗೆ ಇರುವುದರಿಂದ ಸದ್ಯಕ್ಕೆ ಪ್ರಾಣಾಪಾಯವಿಲ್ಲ. ಇಬ್ಬರಿಗೂ ಕುಡಿಯುವ ನೀರು ಪೂರೈಸಲಾಗಿದೆ.
ಹೆಚ್ಚಿನ ವಿವರಗಳಿಗೆ ಕಾಯಲಾಗುತ್ತಿದೆ….

RELATED ARTICLES
- Advertisment -
Google search engine

Most Popular